ಶತಕ ಸಿಡಿಸಿದ ಮಯಾಂಕ್

ಶತಕ ಸಿಡಿಸಿದ ಮಯಾಂಕ್

ವಿಶಾಖಪಟ್ಟಣ, ಅ. 3 : ಭಾರತ ಕ್ರಿಕೆಟ್ ತಂಡದ ಯುವ ಬ್ಯಾಟ್ಸ್ಮನ್ ಮಾಯಾಂಕ್ ಅಗರ್ವಾಲ್ ಟೆಸ್ಟ್ ಕ್ರಿಕೆಟ್ನಲ್ಲಿ ಚೊಚ್ಚಲ ಶತಕ ಸಾಧನೆ ಮಾಡಿದ್ದಾರೆ.
ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ವಿಶಾಖಪಟ್ಟಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಮಯಾಂಕ್, ನೂತನ ಮೈಲುಗಲ್ಲನ್ನು ತಲುಪಿದರು. ರೋಹಿತ್ ಶರ್ಮಾ ಹಾಗೂ ಮಯಾಂಕ್ ಅಗರ್ವಾಲ್ ಉತ್ತಮ ಆರಂಭವೊದಗಿಸಿದರು. ಈ ಪೈಕಿ ಮೊದಲ ದಿನದಾಟದಲ್ಲಿ 84 ರನ್ ಗಳಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದ ಕರ್ನಾಟಕದ ಮಯಾಂಕ್, ಎರಡನೇ ದಿನದಾಟದಲ್ಲೂ ಉತ್ತಮ ಲಯ ಕಂಡುಕೊಂಡರು. ಈ ಮೂಲಕ ಟೆಸ್ಟ್ ಕ್ರಿಕೆಟ್ನಲ್ಲಿ ಚೊಚ್ಚಲ ಶತಕ ಸಾಧನೆ ಮಾಡಿದರು.

ಫ್ರೆಶ್ ನ್ಯೂಸ್

Latest Posts

Featured Videos