ಇವಳು ಮಹಾರಾಷ್ಟ್ರದ ಮಹಾತಾಯಿ

ಇವಳು ಮಹಾರಾಷ್ಟ್ರದ ಮಹಾತಾಯಿ

ಮುಂಬೈ, ಡಿ. 18 : ಈಕೆ ಒಂದಲ್ಲ ಎರಡಲ್ಲ ಬರೋಬ್ಬರಿ 19 ಮಕ್ಕಳನ್ನು ಹೆತ್ತ ಮಹಾರಾಷ್ಟ್ರದ ಮಹಾತಾಯಿ… ಇದೀಗ ಈಕೆ 20ನೇ ಮಗುವಿಗೆ ಜನ್ಮ ನೀಡಲು ರೆಡಿಯಾಗಿದ್ದಾಳೆ. ನಿಮ್ಗೆ ನೆನಪಿರ ಬಹುದು.  90 ವರ್ಷ ದಾಟಿದ ಅಜ್ಜಿಯೊಬ್ಬರು ಮಗುವಿಗೆ ಜನ್ಮ ನೀಡಿದ ಸುದ್ದಿಯನ್ನು ಕೇಳಿದಿರಿ. ಇದೀಗ ಮಹಾರಾಷ್ಟ್ರದಲ್ಲಿ 38 ವರ್ಷದ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಲು ಸಿದ್ಧರಾಗಿದ್ದಾರೆ. ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಮಜಲ್ಗಾಂವ್ ಮೂಲದ ಲಂಕಾಬಾಯಿ(38) ಈ ಮಹಿಳೆ ತಾಯಿಯಾಗುತ್ತಿರುವುದು 20ನೇ ಬಾರಿ ಎಂಬುದೇ ವಿಶೇಷ. 16 ಮಕ್ಕಳನ್ನು ಹೊಂದಿರುವ ಅವರ ನಾಲ್ಕೈದು ಮಕ್ಕಳು ಈಗಾಗಲೇ ಸಾವನ್ನಪ್ಪಿವೆ. ಸದ್ಯಕ್ಕೆ 11 ಮಕ್ಕಳು ಜೀವಂತವಾಗಿದ್ದು, ಕೆಲಸಕ್ಕಾಗಿ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ವಲಸೆ ಬಂದಿದ್ದ ಮಹಿಳೆಯೊಬ್ಬರು ಮಂಗಳವಾರ ಕಬ್ಬಿನ ಗದ್ದೆಯಲ್ಲಿಯೇ ತಮ್ಮ 17ನೇ ಮಗುವಿಗೆ ಜನ್ಮ ನೀಡಿ, ಎಲ್ಲರಲ್ಲಿ ಅಚ್ಚರಿ ಮೂಡಿಸಿದ್ದಾರೆ. ಆದರೆ, ದುರಾದೃಷ್ಟವಶಾತ್ ಆರೋಗ್ಯ ಸಮಸ್ಯೆಯಿಂದ ಹುಟ್ಟಿದ ಬಳಿಕ ಹೆಣ್ಣು ಮಗು ಮೃತಪಟ್ಟಿದೆ.
ಲಂಕಾಬಾಯಿ ಕುಟುಂಬ ಅಲೆಮಾರಿ ಸಮುದಾಯದವರಾಗಿದ್ದು, ಕೆಲಸ ಅರಸಿ ಆಕೆಯ ಕುಟುಂಬ ಕರ್ನಾಟಕಕ್ಕೆ ಬಂದಿತ್ತು. ಸದ್ಯ ಕರ್ನಾಟಕದಲ್ಲಿ ಕಬ್ಬಿನ ಕಟಾವಿನ ಸಮಯವಾಗಿದ್ದು, ಬೆಳಗಾವಿಯ ಕಬ್ಬಿನ ಗದ್ದೆಯೊಂದರಲ್ಲಿ ಮಹಿಳೆ ಹಾಗೂ ಆಕೆಯ ಕುಟುಂಬ ಕೆಲಸ ಮಾಡುತ್ತಿತ್ತು.
ಕೆಲಸ ಮಾಡುತ್ತಿದ್ದ ವೇಳೆಯೇ ಹೆರಿಗೆ ನೋವು ಕಾಣಿಸಿಕೊಂಡ ಪರಿಣಾಮ, ಮಹಿಳೆ ಕಬ್ಬಿನ ಗದ್ದೆಯಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಆದರೆ ಹುಟ್ಟಿದ ಬಳಿಕ ಮಗು ಸಾವನ್ನಪ್ಪಿದೆ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.
ಸೆಪ್ಟೆಂಬರ್ ತಿಂಗಳಿನಲ್ಲಿ ಮಹಿಳೆ ಆರೋಗ್ಯ ಕೇಂದ್ರಕ್ಕೆ ಭೇಟಿ ಕೊಟ್ಟಿದ್ದರು. ಮಹಿಳೆಗೆ 11 ಮಕ್ಕಳಿದ್ದು, ಅದರಲ್ಲಿ 9 ಹೆಣ್ಣು ಮಕ್ಕಳಿದ್ದಾರೆ. ಮೂರು ಬಾರಿ ಗರ್ಭಪಾತವಾಗಿದೆ, 5 ಮಗು ಸಾವನ್ನಪ್ಪಿದೆ ಎಂದು ಆರೋಗ್ಯಾಧಿಕಾರಿ ಡಾ. ಪವಾರ್ ಮಾಹಿತಿ ನೀಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos