ನವದೆಹಲಿ, ಸೆ. 19: ಮಾಜಿ ಸಚಿವ, ಕಾಂಗ್ರೆಸ್ ಪ್ರಬಲ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಇಂದು ನವದೆಹಲಿಯ ಆರ್.ಎಂ.ಎಲ್ ಆಸ್ಪತ್ರೆಯಿಂದ ತಿಹಾರ್ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಆರ್.ಎಂ.ಎಲ್ ಆಸ್ಪತ್ರೆ ವೈದ್ಯರು ಶಿವಕುಮಾರ್ ಅವರ ಆರೋಗ್ಯದಲ್ಲಿ ಯಾವುದೇ ತೊಂದರೆ ಇಲ್ಲ ಎನ್ನುವ ವರದಿ ನೀಡಿರುವ ಹಿನ್ನಲೆಯಲ್ಲಿ, ಪೊಲೀಸರು ಅವರನ್ನು ತಿಹಾರ್ ಜೈಲಿಗೆ ಡಿಕೆಶಿಗೆ ಕರೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಸದ್ಯ ಡಿಕೆಶಿ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದೆ.