ನವದೆಹಲಿ, ಸೆ. 22 : ಕಾಂಗ್ರೆಸ್ ಜೆಡಿಎಸ್ ಬಂಡಾಯ ಶಾಸಕರ ರಾಜೀನಾಮೆಯಿಂದ ತೆರವಾಗಿರುವ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ದಿಲ್ಲಿಗೆ ದೌಡಾಯಿಸಿದ್ದಾರೆ. ಇಂದು (ಭಾನುವಾರ) ಬಿಜೆಪಿ ರಾಷ್ಟ್ರಾಧ್ಯಕ್ಷ ಹಾಗೂ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಸಿಎಂ, ಮಹತ್ವದ ಮಾತುಕತೆ ನಡೆಸಿದ್ದಾರೆ. ಶಾ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ರಾಜ್ಯದಲ್ಲಿ ಉಂಟಾಗಿರುವ ಭೀಕರ ನೆರೆ ಪರಿಸ್ಥಿತಿ ನಿಭಾಯಿಸಲು ಕೂಡಲೇ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.