ಶಿಷ್ಯನ ವಿರುದ್ಧ ಸಿದ್ದರಾಮಯ್ಯ ರಣಕಹಳೆ

ಶಿಷ್ಯನ ವಿರುದ್ಧ ಸಿದ್ದರಾಮಯ್ಯ ರಣಕಹಳೆ

ಬೆಂಗಳೂರು, ಸೆ. 1 : ಅನರ್ಹ ಶಾಸಕ ಎಂಟಿಬಿ ನಾಗರಾಜ್ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ರಣಕಹಳೆ ಮೊಳಗಿಸಿದ್ದಾರೆ. ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅನರ್ಹಗೊಂಡಿರುವ ಎಂಟಿಬಿ ನಾಗರಾಜ್ ಉಪಚುನಾವಣೆಗೆ ಅಖಾಡ ಸಿದ್ಧಗೊಳಿಸಿಕೊಳ್ಳುತ್ತಿದ್ದಾರೆ.
ಎಂಟಿಬಿ ನಾಗರಾಜ್ ನೇರವಾಗಿ ಸಿದ್ದರಾಮಯ್ಯರ ವಿರುದ್ಧ ವಾಗ್ದಾಳಿಸಿದ ಹಿನ್ನಲೆ ಶಿಷ್ಯ ಎಂಟಿಬಿ ವಿರುದ್ಧ ಸಿಡಿದೆದ್ದಿರುವ ಸಿದ್ದರಾಮಯ್ಯ ಹೇಗಾದ್ರೂ ಮಾಡಿ ಹೊಸಕೋಟೆ ಕಾಂಗ್ರೆಸ್ ವಶ ಮಾಡಿಕೊಳ್ಳಲು ಹೊಸ ಅಭ್ಯರ್ಥಿ ಹುಡುಕಿದ್ದಾರೆ ಎನ್ನಲಾಗುತ್ತಿದೆ. ಸಿದ್ದರಾಮಯ್ಯರ ವಿರುದ್ಧ ತೊಡೆ ತೊಟ್ಟಿರುವ ಎಂಟಿಬಿ ನಾಗರಾಜ ಸೋಲಿಸಲು ಮಾಜಿ ಸಿಎಂ ಶಪಥ ಮಾಡಿದ್ದಾರಂತೆ. ಇತ್ತ ಕಾಂಗ್ರೆಸ್ ಟ್ರಬಲ್ ಶೂಟರ್, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಸಹ ಎಂಟಿಬಿ ವಿರುದ್ಧ ಗುಡುಗಿದ್ದಾರೆ. ಹಾಗಾಗಿ ಎಂಟಿಬಿ ನಾಗರಾಜ್ ವಿರುದ್ಧ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಜೊತೆಯಾಗುವ ಸಾಧ್ಯತೆಗಳಿವೆ.
ಯಾರು ‘ಕೈ’ ಅಭ್ಯರ್ಥಿ?
ಪುತ್ರನನ್ನ ಕಣಕ್ಕಿಳಿಸಲು ಎಂಟಿಬಿ ನಾಗರಾಜ್ ಪ್ಲಾನ್ ಮಾಡಿದ್ದಾರೆ. ಬಿಜೆಪಿ ಸಂಸದ ಬಚ್ಚೇಗೌಡರ ಪುತ್ರ ಶರತ್ ಬಚ್ಚೇಗೌಡ ಕಾಂಗ್ರೆಸ್ ಪಕ್ಷಕ್ಕೆ ಕರೆತಂದು ಕಣಕ್ಕಿಳಿಸುವ ಕುರಿತು ಚಿಂತಿಸಲಾಗಿದೆ. ಒಂದು ವೇಳೆ ಬಚ್ಚೇಗೌಡರರು ಒಪ್ಪದಿದ್ದಲ್ಲಿ ತಮ್ಮ ಆಪ್ತ ಶಿಷ್ಯ ಬೈರತಿ ಸುರೇಶ್ ಅವರ ಪತ್ನಿ ಪದ್ಮಾವತಿ ಹೊಸಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗೋದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.

ಫ್ರೆಶ್ ನ್ಯೂಸ್

Latest Posts

Featured Videos