ಜಗತ್ತಿನ ಎತ್ತರದ ಶಿವನ ಪ್ರತಿಮೆ ನಿರ್ಮಾಣ..!

ಜಗತ್ತಿನ ಎತ್ತರದ ಶಿವನ ಪ್ರತಿಮೆ ನಿರ್ಮಾಣ..!

ಜೈಪುರಮೇ. 31, ನ್ಯೂಸ್ ಎಕ್ಸ್ ಪ್ರೆಸ್: ಜಗತ್ತಿನ ಅತೀ ಎತ್ತರದ ಏಕತಾ ಪ್ರತಿಮೆ (ಸ್ಟಾಚು ಆಫ್ ಯುನಿಟಿ) ಬಳಿಕ ಭಾರತ ಇನ್ನೊಂದು ಅತೀ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ಕೈ ಹಾಕಿದ್ದು, ಜಗತ್ತಿನ ಅತೀ ಎತ್ತರದ ಶಿವನ ಪ್ರತಿಮೆಯನ್ನು ರಾಜಸ್ಥಾನದಲ್ಲಿ ನಿರ್ಮಾಣ ಮಾಡಲಾಗುತ್ತಿದೆ.

ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಏಕತಾ ಪ್ರತಿಮೆ ನಿರ್ಮಿಸಿ ಭಾರತ ವಿಶ್ವಮಟ್ಟದಲ್ಲಿ ಖ್ಯಾತಿ ಗಳಿಸಿದೆ. ಜಗತ್ತಿನಲ್ಲಿಯೇ ಅತ್ಯಂತ ಎತ್ತರದ ಪ್ರತಿಮೆ ಎಂದು ಬಿರುದು ಪಡೆದಿದೆ. ಈಗ ರಾಜಸ್ಥಾನದ ನಾಥದ್ವಾರದ ಗಣೇಶ್ ತೆಕ್ರಿ ಪ್ರದೇಶದಲ್ಲಿ ಪ್ರಪಂಚದ ಅತೀ ಎತ್ತರದ ಶಿವನ ಪ್ರತಿಮೆ ನಿರ್ಮಾಣ ಮಾಡಲಾಗುತ್ತಿದೆ. ಈ ಪ್ರತಿಮೆಗೆ ‘ಸ್ಟ್ಯಾಚ್ಯೂ ಆಫ್ ಬಿಲೀಫ್’ ಎಂದು ಹೆಸರಿಡಲಾಗಿದೆ.  ಶಿವನ ಪ್ರತಿಮೆಯನ್ನು ಮಿರ್ಜಾ ಗ್ರೂಪ್ ಕಂಪನಿ ನಿರ್ಮಾಣ ಮಾಡುತ್ತಿದೆ. ಶಿವನ ಪ್ರತಿಮೆಯು 351 ಅಡಿ ಎತ್ತರವಿದ್ದು, 20 ಅಡಿ ಎತ್ತರದಲ್ಲಿ ಮೂರು ವೀಕ್ಷಣಾ ಗ್ಯಾಲರಿ ಇದೆ. ಅಲ್ಲದೆ ಪ್ರತಿಮೆಯ 110 ಅಡಿ ಹಾಗೂ 270 ಅಡಿಗಳ ಎತ್ತರಕ್ಕೆ ಲಿಫ್ಟ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos