ಶಿವಕುಮಾರ ಸ್ವಾಮಿಗಳ ಪೋಟೋಗೆ ಪೂಜೆ ಸಲ್ಲಿಸಿದ ಬಿಎಸ್ ವೈ

ಶಿವಕುಮಾರ ಸ್ವಾಮಿಗಳ ಪೋಟೋಗೆ ಪೂಜೆ ಸಲ್ಲಿಸಿದ ಬಿಎಸ್ ವೈ

ತುಮಕೂರು, ಜು. 27 : ನೂತನ ಸಿಎಂಯಾಗಿ ನಾಲ್ಕನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ ಬಿ.ಎಸ್.ಯಡಿಯೂರಪ್ಪ ಲಿಂ.ಡಾ.ಶ್ರೀ ಶಿವಕುಮಾರ ಸ್ವಾಮಿಗಳ ಪೋಟೋಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದಿದ್ದಾರೆ.
ರಾಜ್ಯ 25 ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಮೊದಲ ಬಾರಿಗೆ ವಿಧಾನಸೌಧಕ್ಕೆ ಪ್ರವೇಶ ಮಾಡಿದರು. ಬಳಿಕ ತಮ್ಮ ಕೊಠಡಿಗೆ ತೆರಳಿದ ಬಿಎಸ್ ವೈ ಲಿಂ.ಶ್ರೀಗಳ ಪೋಟೋಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ನಂತರ ಸರಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಅವರು ನೂತನ ಸಿಎಂಗೆ ಹೂಗುಚ್ಛ ನೀಡಿ ಶುಭ ಕೋರಿದ್ದಾರೆ. ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕಾರ್ಯಾಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಹಲವರ ಭೇಟಿಗೆ ಶನಿವಾರ ದಿಲ್ಲಿಗೆ ತೆರಳುತ್ತಿದ್ದಾರೆ. ಈ ಸಂದರ್ಭದಲ್ಲಿ ವರಿಷ್ಠರಿಗೆ ಧನ್ಯವಾದ ಹೇಳುವುದರ ಜತೆಗೆ ತೀವ್ರ ಬರಗಾಲಕ್ಕೆ ತುತ್ತಾಗಿರುವ ರಾಜ್ಯಕ್ಕೆ ಹೆಚ್ಚಿನ ನೆರವು ಕೋರುವ ಸಾಧ್ಯತೆಗಳಿವೆ.

ಫ್ರೆಶ್ ನ್ಯೂಸ್

Latest Posts

Featured Videos