ಮತದಾರರಿಗೆ ಬೆದರಿಕೆ ಆರೋಪ: ಡಿಕೆ ಶಿವಕುಮಾರ್ ವಿರುದ್ಧ ದೂರು

ಮತದಾರರಿಗೆ ಬೆದರಿಕೆ ಆರೋಪ: ಡಿಕೆ ಶಿವಕುಮಾರ್ ವಿರುದ್ಧ ದೂರು

ಬೆಂಗಳೂರು: ರಾಜ್ಯದೆಲ್ಲಡೆ ಲೋಕಸಭೆ ಚುಣಾವಣೆ ಬಿಸಿ ದಿನದಿಂದ ದಿನಕ್ಕೆ ಹೆಚ್ಚಗುತ್ತಿದೆ. ಡಿಕೆ ಶಿವಕುಮಾರ್ ಮತದಾರರನ್ನು ಬ್ಲ್ಯಾಕ್​ಮೇಲ್ ಮಾಡಿದ್ದಾರೆ ಎಂದು ಬಿಜೆಪಿ ಕೆಲವು ದಿನಗಳ ಹಿಂದೆ ಟ್ವೀಟ್ ಮಾಡಿತ್ತು. ಅದರಲ್ಲಿ ಡಿಕೆಶಿ ಮಾತನಾಡುತ್ತಿರುವ ವಿಡಿಯೋವನ್ನೂ ಪೋಸ್ಟ್ ಮಾಡಿತ್ತು.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ತಮ್ಮ ಸಹೋದರ ಡಿಕೆ ಸುರೇಶ್​ಗೆ ಮತ ನೀಡುವಂತೆ ಮತದಾರರಿಗೆ ಬೆದರಿಕೆ ಹಾಕಿರುವ ಆರೋಪದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಬೆಂಗಳೂರು ದಕ್ಷಿಣ ಮತ್ತು ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರಗಳ ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಕಾವೇರಿ ನೀರು ಸಂಪರ್ಕ, ಸಿಎ ನಿವೇಶನ ಮತ್ತು ಹಕ್ಕುಪತ್ರ ಹಸ್ತಾಂತರಿಸಬೇಕಾದರೆ ಸುರೇಶ್‌ಗೆ ಮತ ನೀಡಬೇಕು ಎಂದು ಶಿವಕುಮಾರ್‌ ಹೇಳಿದ್ದಾರೆ ಎಂದು ಬಿಜೆಪಿ ದೂರಿನಲ್ಲಿ ಉಲ್ಲೇಖಿಸಿದೆ. ಎರಡು ವಿಧಾನಸಭಾ ಕ್ಷೇತ್ರಗಳು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುತ್ತವೆ.

 

ಫ್ರೆಶ್ ನ್ಯೂಸ್

Latest Posts

Featured Videos