ಶಿವಣ್ಣ ನಿಗೆ ಸರ್ಪ್ರೈಸ್ ನೀಡಿದ ಕುಂಬ್ಳೆ

ಶಿವಣ್ಣ ನಿಗೆ ಸರ್ಪ್ರೈಸ್ ನೀಡಿದ ಕುಂಬ್ಳೆ

ಲಂಡನ್ , ಜು.13 : ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಲಂಡನ್ನಲ್ಲಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಭಾರತ ತಂಡದ ಮಾಜಿ ಕ್ರಿಕೆಟ್ ಆಟಗಾರ ಅನಿಲ್ ಕುಂಬ್ಳೆ ಅವರು ಶಿವರಾಜ್ ಕುಮಾರ್ ಅವರಿಗೆ ಸರ್ಪ್ರೈಸ್ ನೀಡಿದ್ದಾರೆ.
ಶಿವರಾಜ್ಕುಮಾರ್ ಹಾಗೂ ಅವರ ಕುಟುಂಬದವರನ್ನು ಅನಿಲ್ ಕುಂಬ್ಳೆ ಭೇಟಿ ಮಾಡಿದ್ದಾರೆ. ಶಿವರಾಜ್ ಕುಮಾರ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಅಲ್ಲದೆ ಅವರ ಆರೋಗ್ಯವನ್ನು ಕೂಡ ವಿಚಾರಿಸಿದ್ದಾರೆ.
ಅನಿಲ್ ಕುಂಬ್ಳೆ ಅವರು ಶಿವಣ್ಣ ಹಾಗೂ ಅವರ ಕುಟುಂಬದ ಜೊತೆಯಿರುವ ಫೋಟೋ ಹಾಕಿ ಅದಕ್ಕೆ, “ಹುಟ್ಟುಹಬ್ಬದಂದೇ ಶಿವಣ್ಣ ಅವರನ್ನು ಭೇಟಿ ಮಾಡಿದ್ದು ಖುಷಿ ಆಗಿದೆ. ಶಿವಣ್ಣ ನಿಮಗೆ ಹುಟ್ಟುಹಬ್ಬದ ಶುಭಾಶಯಗಳು ಹಾಗೂ ನಿಮ್ಮ ಆರೋಗ್ಯ ಬೇಗ ಚೇತರಿಸಿಕೊಳ್ಳಲಿ” ಎಂದು ಟ್ವೀಟ್ ಮಾಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos