ನಟ ಶಿವರಾಜ್​ಕುಮಾರ್​ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಕೆ

ನಟ ಶಿವರಾಜ್​ಕುಮಾರ್​ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಕೆ

ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅಭ್ಯರ್ಥಿಗಳು ಮತದಾರರನ್ನು ತಮ್ಮತ್ತ ಸೆಳೆಯಲು ಇನ್ನಿಲ್ಲದ ಕಸರತ್ತನ್ನು ಮಾಡುತ್ತಿದ್ದಾರೆ.

ನಟ ಶಿವರಾಜ್ ಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ಒಬಿಸಿ ಮೋರ್ಚಾ ದೂರ ನೀಡಿದೆ ನಟ ಶಿವರಾಜ್ ಕುಮಾರ್ ಅವರು ಅವರ ಪತ್ನಿ ಗೀತಾ ಶಿವರಾಜಕುಮಾರ್ ಅವರ ಪರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ.

ಇದರಿಂದ ಅವರ ಸಿನಿಮಾ ಜಾಹೀರಾತುಗಳನ್ನು ನಿಷೇಧ ಮಾಡಬೇಕು ಎಂದು ಚುನಾವಣಾ ಆಯೋಗಕ್ಕೆ ಬಿಜೆಪಿ ಒಬಿಸಿ ಮೋರ್ಚಾ ದೂರು ನೀಡಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜಕುಮಾರ್ ಅಧಿಕೃತವಾಗಿ ಪ್ರಚಾರ ಆರಂಭಿಸಿದ್ದಾರೆ. ಪತ್ನಿಯ ಚುನಾವಣಾ ಪ್ರಚಾರಕ್ಕೆ ನಟ ಶಿವರಾಜ್ ಕುಮಾರ್ ಕೂಡ ಸಾತ್ ನೀಡಿದ್ದರು.

ಭದ್ರಾವತಿಯಿಂದ ಪ್ರಚಾರ ಆರಂಭಿಸಿದ ಗೀತಾ ಶಿವರಾಜಕುಮಾರ್ ತಮಗೆ ಮತ ಹಾಕುವಂತೆ ಮತಯಾಚನೆ ಮಾಡಿದರು. ಶಿವರಾಜ್ ಕುಮಾರ್, ಸಚಿವ ಮಧು ಬಂಗಾರಪ್ಪ, ಶಾಸಕರಾದ ಬಿಕೆ ಸಂಗಮೇಶ್ವರ, ಬೇಳೂರು ಗೋಪಾಲಕೃಷ್ಣ ಹಾಗೂ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಮತ್ತಿತ್ತರು ಭಾಗಿಯಾಗಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos