ಮಹಾಶಿವರಾತ್ರಿಯ ಸಂಭ್ರಮ

  • In State
  • March 4, 2019
  • 198 Views
ಮಹಾಶಿವರಾತ್ರಿಯ ಸಂಭ್ರಮ

ಮಾ.4, ನ್ಯೂಸ್ ಎಕ್ಸ್ ಪ್ರೆಸ್ ಮಂಗಳೂರು: ಇಂದು ನಾಡಿನೆಲ್ಲೆಡೆ ಮಹಾಶಿವರಾತ್ರಿಯ ಸಮರಂಬ.ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಸೇರಿದಂತೆ ಬಹುತೇಕ ಎಲ್ಲಾ ಶಿವಾಲಯಗಳಲ್ಲಿ ಜಾತ್ರೆ, ರುದ್ರಾಭಿಷೇಕ ಹಾಗೂ ವಿಶೇಷ ಪೂಜೆಗಳು ಭಕ್ತಿ, ಸಂಭ್ರಮದಿಂದ ನಡೆಯುತ್ತಿವೆ. ಶಿವನ ಅಭಿಷೇಕ ಪ್ರಿಯ. ರುದ್ರ ಮಂತ್ರಗಳಿಂದ ಶಿವಲಿಂಗಕ್ಕೆ ಜಲಾಭಿಷೇಕ ಮಾಡಿ, ಶಿವತೀರ್ಥ ಸ್ವೀಕರಿಸುವ ಶಾಸ್ತ್ರಕರ್ಮ ನಡೆದು ಬರುತ್ತಿದೆ. ಅದರಂತೆ ಮಂಗಳೂರಿನಲ್ಲಿ ಕದ್ರಿ ಮಂಜುನಾಥ ದೇವಾಲಯ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ವರ್ಷಾವಧಿ ಉತ್ಸವ ಹಾಗೂ ಶಿವರಾತ್ರಿ ಮಹೋತ್ಸವ ನಡೆಯುತ್ತದೆ.ಇಂದು ಮುಂಜಾನೆಯಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶ್ರೀ ಕ್ಷೇತ್ರದಲ್ಲಿ ಆರಂಭವಾಗಿವೆ.

ಕದ್ರಿ ಮಂಜುನಾಥ ದೇಗುಲದಲ್ಲಿ ಶಿವರಾತ್ರಿ ಪ್ರಯುಕ್ತ ವಿಶೇಷ ರುದ್ರಾಭಿಷೇಕ, ಶಿವಪೂಜೆ, ರಾತ್ರಿ ಜಮಾ ಪೂಜೆ, ಉತ್ಸವ ಬಲಿ, ಬೆಳ್ಳಿ ರಥೋತ್ಸವ ಜರಗಲಿದೆ. ಪಾಂಡೇಶ್ವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಅಂಗವಾಗಿ ಇಂದು ಮುಂಜಾನೆಯಿಂದ ಮರುದಿನ ಬೆಳಗ್ಗೆವರೆಗೆ ವಿಶೇಷ ಪೂಜೆ, ಸಾಂಸ್ಕೃತಿಕ ಕಾರ್ಯಕ್ರಮ, ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ.

ಫ್ರೆಶ್ ನ್ಯೂಸ್

Latest Posts

Featured Videos