ಬೆಂಗಳೂರು, ಮಾ.20, ನ್ಯೂಸ್ ಎಕ್ಸ್ ಪ್ರೆಸ್ : ಶೋಭಾ ವಿರುದ್ಧ ಭಾರೀ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಯಾವ ಕಾರಣಕ್ಕೂ ಶೋಭಾ ಕರಂದ್ಲಾಜೆಯನ್ನು ಕಣಕ್ಕಿಳಿಸಲು ಸಾಧ್ಯವಿಲ್ಲ ಎಂದು ರಾಜ್ಯದ ಕೆಲ ನಾಯಕರು ಪಟ್ಟು ಹಿಡಿದಿದ್ದಾರೆ ಎಂದು ಹೇಳಲಾಗಿದೆ.ಇಬ್ಬರ ಜಗಳ ಮೂರನೆಯವನಿಗೆ ಲಾಭದ ಪರಿಸ್ಥಿತಿ ಈಗ ನಿರ್ಮಾಣವಾಗಿದೆ. ಆದರೆ ಅತ್ತ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಶೋಭಾ ಕರಂದ್ಲಾಜೆ ಪರವಾಗಿ ನಿಂತಿದ್ದಾರೆ ಎಂದು ಹೇಳಲಾಗಿದೆ. ಕ್ಷೇತ್ರದಲ್ಲಿ ಸಾಕಷ್ಟು ಜನವಿರೋಧ ಕಟ್ಟಿಕೊಂಡಿರುವ ಶೋಭಾ ಕರಂದ್ಲಾಜೆ ಈ ಬಾರಿ ಸ್ಪರ್ಧಿಸಿದರೆ ಕಾರ್ಯಕರ್ತರು ಕೂಡ ಕೈ ಕೊಡುವ ಸಾಧ್ಯತೆ ಇದೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿಯ ಟಿಕೆಟ್ ಸಮರ ದೆಹಲಿ ಪಡಸಾಲೆ ತಲುಪಿದೆ.ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಜಯಪ್ರಕಾಶ್ ಹೆಗ್ಡೆ ನಡುವಿನ ಆಂತರಿಕ ಗುದ್ದಾಟ ಈಗ ತಾರಕಕ್ಕೇರಿದೆ.