ಹೆಣ್ಣುಮಕ್ಕಳು ದಾರಿ ತಪ್ಪಿದ್ದಾರೆ: HDK ಪರ ನಿಂತ ಶೋಭಾ ಕರಂದ್ಲಾಜೆ

ಹೆಣ್ಣುಮಕ್ಕಳು ದಾರಿ ತಪ್ಪಿದ್ದಾರೆ: HDK ಪರ ನಿಂತ ಶೋಭಾ ಕರಂದ್ಲಾಜೆ

ಬೆಂಗಳೂರು: ತುಮಕೂರು ಚುನಾವಣಾ ಪ್ರಚಾರದ ರೋಡ್‌ ಶೋನಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದ ಜೆಡಿಎಸ್‌ ನಾಯಕ ಹೆಚ್‌ಡಿ ಕುಮಾರಸ್ವಾಮಿ, ಕಾಂಗ್ರೆಸ್ ಜಾರಿಗೆ ತಂದಿರುವ ಗ್ಯಾರಂಟಿಗಳಿಂದ ಹಳ್ಳಿ ಹೆಣ್ಣುಮಕ್ಕಳು ದಾರಿ ತಪ್ಪಿದ್ದಾರೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಕಾಂಗ್ರೆಸ್‌ನ ಹಲವಾರು ಮುಖಂಡರು ವಾಗ್ದಾಳಿ ನಡೆಸುತ್ತಿದ್ದಾರೆ.

ಗ್ಯಾರಂಟಿ ಯೋಜನೆಯಿಂದ  ಹೆಣ್ಣುಮಕ್ಕಳು ದಾರಿ ತಪ್ಪಿದ್ದಾರೆ ಎಂದು ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರ ಪರ ಕೇಂದ್ರ ಸಚಿವೆ ಹಾಗೂ ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂಧ್ಲಾಜೆ ನಿಂತಿದ್ದಾರೆ.

ಈ ಕುರಿತು ಮಾತನಾಡಿರುವ ಶೋಭಾ ಕರಂದ್ಲಾಜೆ ಅವರು, ಹೆಚ್. ಡಿ ಕುಮಾರಸ್ವಾಮಿ ಅವರಿಗೆ ಮಹಿಳೆಯರ  ಬಗ್ಗೆ ಗೌರವವಿದೆ. ಆದರೆ ಅವರ ಹೇಳಿಕೆ ತಿರುಚುವ ಕೆಲಸವನ್ನ ಕಾಂಗ್ರೆಸ್ ಮಾಡುತ್ತಿದೆ. ನೂರು ಸುಳ್ಳು ಹೇಳಿ ಸತ್ಯ ಮಾಡುವ ಚಾಳಿ ಅವರದ್ದು ಎಂದು ಕಿಡಿಕಾರಿದರು. ಕಾಂಗ್ರೆಸ್ ಗೆ ಚುನಾವಣೆಗೆ ಒಂದು ವಿಷಯ ಸಿಗಬೇಕು  ವಿಚಾರ ಸಿಗದಿದ್ದಕ್ಕೆ ತಿರುಗಿ ಮುರುಗಿ ಹೇಳಿಕೆ ಕೊಡುತ್ತಿದೆ ಎಂದು ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದರು.

ಫ್ರೆಶ್ ನ್ಯೂಸ್

Latest Posts

Featured Videos