ಬೆಂಗಳೂರು: ಸಿಎಂ ಕುಮಾರಸ್ವಾಮಿ ಬಿಯರ್ ಪ್ರಿಯರಿಗೆ ಶಾಕ್ ನೀಡಿದ್ದಾರೆ.
ಸಮ್ಮಿಶ್ರ ಸರ್ಕಾರದ ಎರಡನೇ ಬಜೆಟ್ ಮಂಡಿಸಿದ ಸಿಎಂ, ಬಿಯರ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದರು. 20,950 ಕೋಟಿ ರೂ. ಸಂಗ್ರಹಣೆ ಗುರಿ ಹೊಂದಿರುವ ರಾಜ್ಯ ಸರ್ಕಾರ ಬಿಯರ್, ಡ್ರಾಟ್ ಬಿಯರ್, ಮೈಕ್ರೊ ಬ್ರಿವರಿಯಲ್ಲಿ ತಯಾರಾಗುವ ಬಿಯರ್ ಹಾಗೂ ಕಡಿಮೆ ಆಲ್ಕೋಹಾಲಿಕ್ ಬಿವರೇಜಸ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಮತ್ತಷ್ಟು ಹೆಚ್ಚಿಸಲು ನಿರ್ಧರಿಸಿದೆ.