ಯುವ ಬ್ಯಾಟರ್ ಶುಭ್ಮನ್ ಗಿಲ್ ಗೆ ಡೆಂಗ್ಯೂ ಸೋಂಕು ದೃಢ!

ಯುವ ಬ್ಯಾಟರ್ ಶುಭ್ಮನ್ ಗಿಲ್ ಗೆ  ಡೆಂಗ್ಯೂ ಸೋಂಕು ದೃಢ!

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಕ್ರಿಕೆಟ್ ಎನ್ನುವುದು ಒಂದು ದೊಡ್ಡ ಮಟ್ಟದಲ್ಲಿ ಬೆಳೆದಿದೆ ಕ್ರಿಕೆಟ್ ನಲ್ಲಿ ಹಲವಾರು ಮಂದಿ ಅವರ ಜೀವನವನ್ನು ಬದಲಾಯಿಸಿಕೊಂಡಿದ್ದಾರೆ ಅದೇ ತರಹ ಟೀಮ್ ಇಂಡಿಯಾಗೆ ಬಂದಂತಹ ಯುವ ಬ್ಯಾಟರಾದ ಶುಭ್ಮನ್ ಗಿಲ್ ರವರು ಅತ್ಯಂತ ಯಶಸ್ವಿದಾಯಕ ಬ್ಯಾಟರ್ ಆಗಿದ್ದಾರೆ.
ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಚಾಲನೆ ಸಿಕ್ಕಾಗಿದೆ. ಭಾರತ ತಂಡ ಅಕ್ಟೋಬರ್ 8 ರಂದು ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ. ಆದರೆ, ಈ ಮೊದಲ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾಕ್ಕೆ ದೊಡ್ಡ ಆಘಾತ ಉಂಟಾಗಿದೆ. ತಂಡದ ಸ್ಟಾರ್ ಇನ್-ಫಾರ್ಮ್ ಬ್ಯಾಟರ್ ಶುಭ್ಮನ್ ಗಿಲ್ ಅವರಿಗೆ ಡೆಂಘೀ ಸೋಂಕು ದೃಢ ಪಟ್ಟಿದೆ. 24ರ ಹರೆಯದ ಗಿಲ್ ಭಾನುವಾರ ಆಸ್ಟ್ರೇಲಿಯಾ ವಿರುದ್ಧದ ಮೊದಲ ವಿಶ್ವಕಪ್ ಪಂದ್ಯದಲ್ಲಿ ಆಡುವ ಸಾಧ್ಯತೆಯಿಲ್ಲ ಎಂದು ಹೇಳಲಾಗಿದೆ. ನಿನ್ನೆ ತರಬೇತಿ ಅವಧಿಯಲ್ಲಿ ಗಿಲ್ ಅವರು ಡೆಂಗ್ಯೂನಿಂದ ಬಳಲುತ್ತಿದ್ದರು ಎಂದು ವರದಿ ಆಗಿದೆ.
2023 ರ ಏಕದಿನ ಕ್ರಿಕೆಟ್ನಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಗಿಲ್, ವಿಶ್ವಕಪ್ ಮೊದಲ ಪಂದ್ಯದಿಂದ ಮಾರಕವಾಗಲಿದ್ದಾರೆ ಎಂದು ನಂಬಲಾಗಿತ್ತು. ಆದರೀಗ ಇವರ ಅನುಪಸ್ಥಿತಿ ತಂಡಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಇವರ ಬದಲು ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯದಲ್ಲಿ ಇಶಾನ್ ಕಿಶನ್ ಆಡುವ ಸಾಧ್ಯತೆ ಇದೆ.

ಫ್ರೆಶ್ ನ್ಯೂಸ್

Latest Posts

Featured Videos