ಮೋದಿಯಂತೆ ನಾವು ನಂಬಿಸಿ ಮೋಸ ಮಾಡಿಲ್ಲಾ: ಸಿಎಂ ಸಿದ್ದರಾಮಯ್ಯ

ಮೋದಿಯಂತೆ ನಾವು ನಂಬಿಸಿ ಮೋಸ ಮಾಡಿಲ್ಲಾ: ಸಿಎಂ ಸಿದ್ದರಾಮಯ್ಯ

ಹಾಸನ: ರಾಜ್ಯದಲ್ಲಿ ಲೋಕಸಭಾ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ, ರಾಜ್ಯದಲ್ಲೇ ಅಭ್ಯರ್ಥಿಗಳ ಪರ ನಾಯಕರು ಭರ್ಜರಿ ಮತ ಯಾಚಿಸುತ್ತಿದ್ದಾರೆ. ಇಂದು ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಎಂ ಪಾಟೀಲ್ ಅವರ ಪರವಾಗಿ ಸಿಎಂ ಸಿದ್ದರಾಮಯ್ಯನವರು ಮತಯಾಚಿಸಿದರು.

ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶ್ರೇಯಸ್ ಎಂ ಪಟೇಲ್ ಪರವಾಗಿ ನಡೆದ ಬೃಹತ್ ಪ್ರಜಾಧ್ವನಿ-2 ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದರು.  ನಾವು ಕೇವಲ ಭಾವನಾತ್ಮಕವಾಗಿ ನಿಮ್ಮನ್ನು ಕೆರಳಿಸಿ ಬಕ್ರಾ ಮಾಡುವುದಿಲ್ಲ. ನಿಮ್ಮ ಬದುಕಿನ ಸಂಕಷ್ಟಗಳ ಜತೆಗೆ ನಿಲ್ಲುತ್ತೇವೆ ಎಂದರು.  ರಾಜ್ಯಕ್ಕೆ ಬಿಜೆಪಿ ಮಾಡುತ್ತಿರುವ ಅನ್ಯಾಯದ ಬಗ್ಗೆ ಪ್ರಜ್ವಲ್ ರೇವಣ್ಣ, ದೇವೇಗೌಡರು ನೆಪಕ್ಕೂ ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಿಲ್ಲ ಏಕೆ ಎಂದು ಸಿ.ಎಂ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.

ನಿರ್ಮಲಾ ಸೀತಾರಾಮನ್ ಅವರು ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಕೊಡುವುದಾಗಿ ಬಜೆಟ್ ನಲ್ಲಿ ಘೋಷಿಸಿದರು. ಆದರೆ ಇದುವರೆಗೂ ಒಂದೇ ಒಂದು ರೂಪಾಯಿಯನ್ನೂ ಬಿಡುಗಡೆ ಮಾಡದೆ ವಂಚಿಸಿದ್ದಾರೆ. ಈ ವಂಚನೆಯನ್ನು ಪ್ರಶ್ನಿಸುವುದನ್ನು ಬಿಟ್ಟ ಜೆಡಿಎಸ್ ನವರು ಹೋಗಿ ಬಿಜೆಪಿ ಜತೆಗೇ ಜಮೆಯಾಗಿದ್ದಾರೆ. ಇದು ಪ್ರಜ್ವಲ್ ರೇವಣ್ಣ ಅವರು ತಮಗೆ ಮತ ಹಾಕಿದವರಿಗೆ ಮಾಡಿದ ದ್ರೋಹ ಅಲ್ಲವೇ ಎಂದು ಪ್ರಶ್ನಿಸಿದರು.

ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀನಿ ಅಂದಿದ್ದ ಮೋದಿಯವರನ್ನು ನೀವೂ ನಂಬಿದ್ರಿ. ಭಾರತೀಯರೆಲ್ಲರೂ ನಂಬಿದ್ರು. ಆದರೆ, ಉದ್ಯೋಗ ಕೊಡಿ ಅಂದಾಗ, ಹೋಗಿ ಪಕೋಡ ಮಾರಾಟ ಮಾಡಿ ಅಂದ್ರು. ಇದು ವಿರಧ್ಯಾರ್ಥಿಗಳಿಗೆ ಮಾಡಿದ ಮೋಸ ಅಲ್ವಾ.

ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಎಂದ ಮೋದಿ ಸರ್ಕಾರ ಪ್ರತಿಭಟನಾನಿರತ ರೈತರ ಮೇಲೆ ದೌರ್ಜನ್ಯ ನಡೆಸಿದ್ದು ಮಹಾದ್ರೋಹ ಅಲ್ಲವೇ.

ರಾಜ್ಯದ ಜನತೆಯ ಸಂಕಷ್ಟಕ್ಕೆ ಸ್ಪಂದಿಸುವ ಸಲುವಾಗಿ ನಾವು ಐದು ಗ್ಯಾರಂಟಿಗಳನ್ನು ರೂಪಿಸಿದೆವು.  ಅದನ್ನು ನಾವು ಜಾರಿ ಮಾಡಿದ್ದೀವಿ. ನಾನು ನುಡಿದಂತೆ ನಡೆದಿದ್ದೇವೆ. ಮೋದಿಯವರಂತೆ ಭಾರತೀಯರನ್ನು ನಾವು ನಂಬಿಸಿ ದ್ರೋಹ ಬಗೆಯಲ್ಲ ಎಂದು ಸ್ಪಷ್ಟವಾಗಿ ನುಡಿದರು.

ಫ್ರೆಶ್ ನ್ಯೂಸ್

Latest Posts

Featured Videos