ಕಾಂಗ್ರೆಸ್ ಪಕ್ಷ ಮಾತ್ರ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿಸಲು ಸಾಧ್ಯ: ಸಿದ್ದರಾಮಯ್ಯ

ಕಾಂಗ್ರೆಸ್ ಪಕ್ಷ ಮಾತ್ರ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿಸಲು ಸಾಧ್ಯ: ಸಿದ್ದರಾಮಯ್ಯ

ಹಾಸನ: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಸ್ಪರ್ಧಿಸಲು ಬಿಜೆಪಿ-ಜೆಡಿಎಸ್‌ ಪಕ್ಷಗಳು ಮೈತ್ರಿ ಮಾಡಿಕೊಂಡು ರಾಜ್ಯದಲ್ಲಿ ಸ್ಪರ್ಧಿಸುತ್ತಿದ್ದಾರೆ. ಲೋಕಸಭೆ ಚುನಾವಣೆ ಲೋಕಸಭಾ ಚುನಾವಣೆಯ ಕಾವು ಜೋರಾಗಿದ್ದು, ಎಲ್ಲಾ ಪಕ್ಷಗಳು ಭರ್ಜರಿ ಪ್ರಚಾರದಲ್ಲಿ ತೊಡಗಿಕೊಂಡಿವೆ.

ನಿನ್ನೆ ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರ ಪರವಾಗಿ ಸಿಎಂ ಸಿದ್ದರಾಮಯ್ಯ ಶ್ರೇಯಸ್ ಪಟೇಲ್ ರನ್ನು ಗೆಲ್ಲಿಸುವಂತೆ ಅವರು ಮನವಿ ಮಾಡಿದರು. ಬೇಲೂರು ಕಾಂಗ್ರೆಸ್ ಸಮಾವೇಶದಲ್ಲಿ ಭಾಗಿಯಾಗಿ ಈ ಸಂದರ್ಭದಲ್ಲಿ ಮಾತನಾಡಿದರು.

ದೇಶದಲ್ಲಿ ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಶ್ರಮಿಕರು. ಮಹಿಳೆಯರು ಉಳಿಯಬೇಕೆಂದರೆ ಸಂವಿಧಾನವನ್ನು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ನಾವು ಕಾಪಾಡಬೇಕಾಗಿದೆ. ದೇಶದಲ್ಲಿ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಯಲು ಆ ಕೆಲಸ ಕೇವಲ ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದು ಸಿದ್ದರಾಮಯ್ಯ ಹೇಳಿದರು.

2019ರಲ್ಲಿ ಇದೇ ದೇವೇಗೌಡರು,  ಮುಂದಿನ ಜನ್ಮ ಅಂತ ಇದ್ರೇ ನಾವು ಮುಸ್ಲಿಂ ಸಮುದಾಯದಲ್ಲಿ ಹುಟ್ಟುತ್ತೀನಿ, ಮತ್ತೆ ನರೇಂದ್ರ ಮೋದಿಯವರು ಪ್ರಧಾನಮಂತ್ರಿಯಾದ್ರೆ ನಾನು ದೇಶ ಬಿಟ್ಟು ಹೋಗ್ಬಿಡ್ತೀನಿ ಅಂತ ಹೇಳಿದರು. ನರೇಂದ್ರ ಮೋದಿಯವರು ಮತ್ತೆ ಪ್ರಧಾನಮಂತ್ರಿ ಆದ್ರೂ ದೇವೇಗೌಡರು ದೇಶ ಬಿಟ್ರಾ, ಪಾಪ ಅವರು ದೇಶ ಬಿಡುವುದು ಬೇಡ ಅವರಿಲ್ಲೇ ಇರಲಿ ದೇವೇಗೌಡರು ಎಂದು ಹೇಳಿದರು.

ಇದೇ ಏಪ್ರಿಲ್‌ 26ನೇ ತಾರೀಕು ಎಲ್ಲಾರು ನಮ್ಮ ಅಭ್ಯರ್ಥಿಗೆ ಮತ ಹಾಗಿ ಅಭ್ಯರ್ಥಿಯನ್ನು ಗೆಲ್ಲಿಸಬೇಕು, ಎಂದು ಮತದಾರರನ್ನು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು.

 

ಫ್ರೆಶ್ ನ್ಯೂಸ್

Latest Posts

Featured Videos