ನೇಹಾ ಕೊಲೆಗಾರನಿಗೆ ಉಗ್ರ ಶಿಕ್ಷೆ: ಸಿದ್ದರಾಮಯ್ಯ

ನೇಹಾ ಕೊಲೆಗಾರನಿಗೆ ಉಗ್ರ ಶಿಕ್ಷೆ: ಸಿದ್ದರಾಮಯ್ಯ

ಮೈಸೂರು: ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರೀತಿಸಲು‌ ನಿರಾಕರಿಸಿದಳು ಎಂಬ ಕಾರಣಕ್ಕಾಗಿ ಪಾಗಲ್‌ ಪ್ರೇಮಿ ಫಯಾಜ್, ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನೇಹಾಳನ್ನು ಚಾಕುವಿನಿಂದ ಬರೋಬ್ಬರಿ 10 ಬಾರಿ ಚುಚ್ಚಿ ಕೊಲೆ ಮಾಡಿದ್ದಾನೆ.

ಪ್ರತಿಪಕ್ಷಗಳು ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದ ಅವರು, ನೇಹಾ ಕೊಲೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ, ಕೊಲೆಗಾರರನ್ನು ಕೂಡಲೇ ಬಂಧಿಸಲಾಗಿದೆ. ಇದು ಲವ್ ಜಿಹಾದ್ ಪ್ರಕರಣವಲ್ಲ. ಸರ್ಕಾರ ತನಿಖೆಯನ್ನು ಗಂಭೀರವಾಗಿ ಕೈಗೊಂಡಿದ್ದು. ಕೊಲೆಗಾರನಿಗೆ ಉಗ್ರ ಶಿಕ್ಷೆ ನೀಡಲು ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

 

ಫ್ರೆಶ್ ನ್ಯೂಸ್

Latest Posts

Featured Videos