ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿಎಂ ಸಿದ್ದರಾಮಯ್ಯ

ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ ಪಕ್ಷ ಒಬಿಸಿಗೆ ನೀಡಲಾಗಿರುವ ಮೀಸಲಾತಿಯನ್ನು ಮುಸ್ಲಿಂ ಸಮುದಾಯಕ್ಕೆ ಹಂಚಿಕೆ ಮಾಡಿದೆ ಎಂದು ಆರೋಪಿಸಿದ್ದ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಚಿನ್ನಪ್ಪ ರೆಡ್ಡಿ ಆಯೋಗದ ಶಿಫಾರಸ್ಸಿನಂತೆ ಮುಸ್ಲಿಂ ಸಮುದಾಯಕ್ಕೆ ಶೇ.4 ರಷ್ಟು ಮೀಸಲಾತಿ 1994 ರಿಂದ ಜಾರಿಗೆ ಬಂದಿತ್ತು. ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ ಮುಂದುವರೆಯಲಿದೆ ಎಂದಿದ್ದಾರೆ.

ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾಲದಲ್ಲಿ ಈ ಮೀಸಲಾತಿಯನ್ನು ಹಿಂಪಡೆದಿದ್ದಕ್ಕೆ ಈ ವರ್ಗ ಸುಪ್ರಿಂ ಕೋರ್ಟ್ ಮೊರೆ ಹೋಗಿತ್ತು. ಆ ವೇಳೆ ಬಿಜೆಪಿ ಸರ್ಕಾರ ಸುಪ್ರೀಂ ಕೋರ್ಟ್ ನ ಮುಂದೆ 4%ಮೀಸಲಾತಿಯನ್ನು ಮುಂದುವರೆಸುವುದಾಗಿ ಮುಚ್ಚಳಿಕೆ ಬರೆದುಕೊಟ್ಟಿದ್ದು, ಈ ಮೀಸಲಾತಿ ಈಗಲೂ ಮುಂದುವರೆಯುತ್ತಿದೆ ಎಂದರು.

ಫ್ರೆಶ್ ನ್ಯೂಸ್

Latest Posts

Featured Videos