ಮತ ಚಲಾಯಿಸಿದ ನಾಡಿನ ಸಾರಥಿ ಸಿದ್ದರಾಮಯ್ಯ

ಮತ ಚಲಾಯಿಸಿದ ನಾಡಿನ ಸಾರಥಿ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ಮೊದಲನೇ ಹಂತದ ಮತದಾನ ನಡೆಯುತ್ತಿದೆ. ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯ ತನಕ ಮತದಾನ ಮಾಡಲು ಅವಕಾಶವಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬೆಂಗಳೂರು ನಗರ ಸೇರಿ 14 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದೆ. ಜನಸಾಮಾನ್ಯರು, ಶಾಸಕರು, ಸಚಿವರ ಹಾದಿಯಾಗಿ, ಸಿನಿಮಾ ನಟರು ಕೂಡ ಸರತಿ ಸಾಲಲ್ಲಿ ನಿಂತು ಮತ ಚಲಾವಣೆಗೆ ಮುಂದಾಗಿದ್ದಾರೆ.

ಮೈಸೂರು ಕೊಡಗು ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಪುತ್ರ ಯತೀಂದ್ರ ಮತ್ತು ಕುಟುಂಬ ಸಮೇತ ಮತಗಟ್ಟೆಗೆ ಬಂದು ಮತಚಲಾಯಿಸಿದ್ದಾರೆ. ಮೈಸೂರು ಲೋಕಸಭಾ ಕ್ಷೇತ್ರ ಬಾರಿ ಜಿದ್ದಾ ಜಿದ್ದಿಗೆ ಕಾರಣವಾಗಿದ್ದು , ಫಲಿತಾಂಶ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos