ಒಗ್ಗಟ್ಟಾಗಿ ಚುನಾವಣೆ ಎದುರಿಸಿ ಗೆಲ್ಲೋಣ: ಸಿಎಂ

ಒಗ್ಗಟ್ಟಾಗಿ ಚುನಾವಣೆ ಎದುರಿಸಿ ಗೆಲ್ಲೋಣ: ಸಿಎಂ

ಬೆಂಗಳೂರು: ಲೋಕಸಭೆ ಚುನಾವಣೆಗೆ ಸಿದ್ಧತೆ ತೀವ್ರಗೊಳಿಸಿರುವ ಕಾಂಗ್ರೆಸ್ ಪಕ್ಷವು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಗುರುವಾರ ಸಂಜೆ ಸಭೆ ನಡೆಸಿ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುವ ಮೂಲಕ ಕನಿಷ್ಠ 20 ಸ್ಥಾನ ಗೆಲ್ಲಬೇಕು ಎಂದು ಸೂಚನೆ ನೀಡಲಾಗಿದೆ.

ನಾವು ನಡೆಸಿರುವ ಎಲ್ಲಾ ಸಮೀಕ್ಷೆಗಳಲ್ಲೂ ಬೆಳಗಾವಿಯಲ್ಲಿ ಉತ್ತಮ ಪ್ರತಿಕ್ರಿಯೆ ಬಂದಿದೆ. ಒಗ್ಗಟ್ಟಾಗಿ ಚುನಾವಣೆ ಮಾಡಿ. ಉತ್ತರ ಕನ್ನಡ ಜಿಲ್ಲೆ ಸೇರಿ ಬೆಳಗಾವಿಯ ಜಿಲ್ಲೆಗಳಿಗೆ ಒಳಪಡುವ ಮೂರೂ ಲೋಕಸಭಾ ಕ್ಷೇತ್ರಗಳಲ್ಲೂ ಖಚಿತವಾಗಿ ಗೆಲುವು ಸಾಧಿಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಕಾವೇರಿಯಲ್ಲಿ ನಡೆದ ಬೆಳಗಾವಿ ಜಿಲ್ಲೆಯ ಸಚಿವರು, ಶಾಸಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಮುಖಂಡರ ಸಭೆಯಲ್ಲಿ ಮುಖ್ಯಮಂತ್ರಿಗಳು ಬೆಳಗಾವಿಯ ಎರಡು ಲೋಕಸಭಾ ಕ್ಷೇತ್ರ ಹಾಗೂ ಬೆಳಗಾವಿ ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲೂ ಗೆಲುವು ಸಾಧಿಸಬಹುದಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 

ಫ್ರೆಶ್ ನ್ಯೂಸ್

Latest Posts

Featured Videos