ಸಿದ್ದರಾಮಯ್ಯ ರಾಜ್ಯದ ಹುಲಿಯಿದ್ದಂತೆ ಭಯದ ಅಗತ್ಯವಿಲ್ಲ: ಜಮೀ‌ರ್

ಸಿದ್ದರಾಮಯ್ಯ ರಾಜ್ಯದ ಹುಲಿಯಿದ್ದಂತೆ ಭಯದ ಅಗತ್ಯವಿಲ್ಲ: ಜಮೀ‌ರ್

ಹುಬ್ಬಳ್ಳಿ: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರ ಎಳ್ಳಷ್ಟು ಇಲ್ಲ, ಅವರು ಹುಲಿ, ಟಗರು ಇದ್ದಂತೆ ಅವರು ಭಯಪಡುವ ಅಗತ್ಯವಿಲ್ಲ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಅವರು ಹೇಳಿದ್ದಾರೆ.

ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಹಿಂದುಳಿದ ವರ್ಗನಾಯಕ ಎನ್ನುವ ಕಾರಣದಿಂದ ಬಿಜೆಪಿ ಟಾರ್ಗೆಟ್ ಮಾಡಿದೆ. ಸಿದ್ದರಾಮಯ್ಯ ಜನರ ಮುಖ್ಯಮಂತ್ರಿ. ಅಂಥವರ ವಿರುದ್ಧ ಯಾರೋ ಖಾಸಗಿ ವ್ಯಕ್ತಿ ಕೊಟ್ಟ ದೂರಿನ ಅನ್ವಯ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಾರೆ ಎಂದರೆ ಏನರ್ಥ? ಈ ಕಾರಣಕ್ಕಾಗಿಯೇ ನಾವು ರಾಜಭವನ ಚಲೋ ಮಾಡಿದೆವು ಎಂದರು. ಇದನ್ನೂ ಓದಿ: ಕೆಎಎಸ್ ಗೆಜೆಟೆಡ್ ಪ್ರೊಬೇಷನರ್ ಮರು ಪರೀಕ್ಷೆಗೆ ಸಿಎಂ ಸೂಚನೆ

ದೂರುಕೊಟ್ಟ ದಿನದಂದೇ ರಾಜ್ಯಪಾಲರು ನೋಟಿಸ್‌ ಕೊಡುತ್ತಾರೆ. ಕೆಲವೇ ದಿನಗಳಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುತ್ತಾರೆ. ಅದಕ್ಕಿಂತ ಮುಂಚೆಯೇ ನವೆಂಬರ್ ನಲ್ಲಿ ಕುಮಾರಸ್ವಾಮಿ ವಿರುದ್ಧ ತನಿಖಾ ಸಂಸ್ಥೆಯೇ ದೂರು ಕೊಟ್ಟರೂ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡಲ್ಲ, ಮುರಗೇಶ ನಿರಾಣಿ, ಶಶಿಕಲಾ ಜೊಲ್ಲೆ ಜನಾರ್ದನ ರೆಡ್ಡಿ ವಿರುದ್ಧ ತನಿಖೆಗೂ ಅನುಮತಿ ಏಕೆ ಕೊಟ್ಟಿಲ್ಲ ಎಂದು ಪ್ರಶ್ನಿಸಿದರು. ಬಿಜೆಪಿಗೆ ಸಿದ್ದರಾಮಯ್ಯ ಜನಪ್ರಿಯತೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಕಿಡಿಕಾಡಿದರು.

 

ಫ್ರೆಶ್ ನ್ಯೂಸ್

Latest Posts

Featured Videos