ಸಿದ್ದು ರಾಜೀನಾಮೆ

ಸಿದ್ದು ರಾಜೀನಾಮೆ

ಬೆಂಗಳೂರು.ಡಿ.9: ಪಕ್ಷದ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರ ಹಿನ್ನೆಲೆಯಲ್ಲಿ ರಾಜೀನಾಮೆ ಘೋಷಿಸಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರಿಗೆ ರವಾನಿಸುವುದಾಗಿ ಸ್ಪಷ್ಟಪಡಿಸಿದ್ದಾರೆ.
ಆಂದಹಾಗೇ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ 2 ಕ್ಷೇತ್ರಗಳಲ್ಲಿ ಮಾತ್ರವೇ ಗೆಲುವ ಸಾಧಿಸಿದೆ. ಹೀಗಾಗಿ ಪಕ್ಷದ ಸೋಲಿನ ಹೊಣೆ ಹೊತ್ತ ಮಾಜಿ ಸಿಎಂ ಸಿದ್ದರಾಮಯ್ಯ ವಿರೋಧ ಪಕ್ಷದ ಸ್ಥಾನವನ್ನು ತಮ್ಮ ಬಳಿ ಇಟ್ಟುಕೊಂಡು, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿರುವುದಾಗಿ ಘೋಷಣೆ ಮಾಡಿದ್ದಾರೆಇದೇ ವೇಳೆ ಸುದ್ದಿಗೋಷ್ಟಿಯಲ್ಲಿ ಪ್ರಶ್ನೆಗಳ ಸುರಿಮಳೆಯೇ ಆಯಿತು. ಆದರೆ, ಸಿದ್ದರಾಮಯ್ಯ ಇವುಗಳಿಗೆ ಉತ್ತರಿಸದೇ ಸುದ್ದಿಗೋಷ್ಟಿಯಿಂದ ತೆರಳಿದರು.

ಫ್ರೆಶ್ ನ್ಯೂಸ್

Latest Posts

Featured Videos