ಸಿದ್ಧಾರ್ಥ್ ಸಾಲಿಗೆ ಸೇರುತ್ತೇನೆ: ವಿಜಯ್ ಮಲ್ಯ

ಸಿದ್ಧಾರ್ಥ್ ಸಾಲಿಗೆ ಸೇರುತ್ತೇನೆ: ವಿಜಯ್ ಮಲ್ಯ

ನವದೆಹಲಿ, ಜು. 31 : ಭಾರತೀಯ ಬ್ಯಾಂಕ್ಗಳಿಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿ ಸದ್ಯ ಮಲ್ಯ ಇಂಗ್ಲೆಂಡಿನಲ್ಲಿದ್ದಾರೆ. ಕೆಫೆ ಕಾಫಿ ಡೇ ಸ್ಥಾಪಕ ವಿ.ಜಿ ಸಿದ್ಧಾರ್ಥ್ ಅವರ ನಾಪತ್ತೆ ಸುದ್ದಿ ತಿಳಿದ ಕೂಡಲೇ ಟ್ವೀಟ್ ಮಾಡಿದ ಮಲ್ಯ, ‘’ನಾನೂ ಕೂಡ ಪರೋಕ್ಷವಾಗಿ ಸಿದ್ಧಾರ್ಥ್ ಅವರ ಸಾಲಿಗೆ ಸೇರುತ್ತೇನೆ. ನನ್ನ ಪರಿಸ್ಥಿತಿ ಕೂಡ ಅವರಂತೆ ಆಗಿದೆ ಎಂದು ಮದ್ಯದ ದೊರೆ ವಿಜಯ್ ಮಲ್ಯ ಟ್ವೀಟ್ನಲ್ಲಿ ಹೇಳಿಕೊಂಡಿದ್ದಾರೆ.
‘’ನಾನು ಕೂಡ ಪರೋಕ್ಷವಾಗಿ ಸಿದ್ಧಾರ್ಥ್ ಅವರ ಸಾಲಿಗೆ ಸೇರುತ್ತೇನೆ. ನನ್ನ ಪರಿಸ್ಥಿತಿ ಕೂಡ ಅವರಂತೆ ಆಗಿದೆ. ತನಿಖಾ ಸಂಸ್ಥೆ ಮತ್ತು ಬ್ಯಾಂಕುಗಳು ಎಂಥವರನ್ನಾದರೂ ಹತಾಶೆಗೊಳಿಸುತ್ತದೆ ಎಂದು ತಿಳಿಸಿದ್ದಾರೆ.
ಮಲ್ಯ ಟ್ವೀಟ್ನಲ್ಲಿ ಏನಿದೆ? : ವಿ.ಜಿ. ಸಿದ್ಧಾರ್ಥ ಒಳ್ಳೆಯ ಮನುಷ್ಯ ಹಾಗೂ ಅದ್ಭುತ ಉದ್ಯಮಿ. ಬರೆದಿರುವ ಪತ್ರ ನೋಡಿ ನನಗೆ ಆಘಾತ. ಸರ್ಕಾರಿ ಏಜೆನ್ಸಿಗಳು ಮತ್ತು ಬ್ಯಾಂಕುಗಳು ಎಂಥವರನ್ನಾದರೂ ಹತಾಶೆಗೆ ದೂಡಬಹುದು. ಸಾಲ ಪೂರ್ಣ ಮರುಪಾವತಿ ಮಾಡುತ್ತೇನೆ ಎಂದರೂ ಅವರು ನನಗೆ ಏನು ಮಾಡುತ್ತಿದ್ದಾರೆಂದು ನೋಡಿ. ಇದೊಂದು ಕೆಟ್ಟ ವರ್ತನೆಯಾಗಿದೆ ಎಂದು ಬರೆದು ಸರ್ಕಾರದ ತನಿಖಾ ಸಂಸ್ಥೆ, ಬ್ಯಾಂಕ್ಗಳ ವಿರುದ್ಧ ವಿಜಯ್ ಮಲ್ಯ ಕಿಡಿಕಾರಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos