ಹಾಲಿ ಕಾಂಗ್ರೆಸ್ ಸಂಸದರಿಗೆ ‘ಸಿಹಿ ಸುದ್ದಿ’ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ

ಹಾಲಿ ಕಾಂಗ್ರೆಸ್ ಸಂಸದರಿಗೆ ‘ಸಿಹಿ ಸುದ್ದಿ’ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ, ಮಾ.11, ನ್ಯೂಸ್ ಎಕ್ಸ್ ಪ್ರೆಸ್: ಕಾಂಗ್ರೆಸ್ ಸಂಸದರ ಕ್ಷೇತ್ರಗಳನ್ನು ಜೆಡಿಎಸ್‍ಗೆ ಬಿಟ್ಟುಕೊಡಲ್ಲ. ಹಾಲಿ ಸಂಸದರಿರುವ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಬೇಕೆಂದು ಹೈಕಮಾಂಡ್‍ ಬಳಿ ಮನವಿ ಮಾಡಿಕೊಂಡಿರುವೆ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಅವರು ಇಂದು ನವದೆಹಲಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ವಿಷಯ ತಿಳಿಸಿದರು, ಇನ್ನು ಇದೇ ವೇಳೆ ಅವರು ಮಾತನಾಡಿ, ಹಾಲಿ ಸಂಸದರಿಗೆ ಟಿಕೆಟ್ ತಪ್ಪಿಸಬೇಡಿ ಎಂದಿದ್ದೇನೆ. ವರಿಷ್ಠರಿಗೆ ಹಾಲಿ ಸಂಸದರಿಗೆ ಟಿಕೆಟ್ ನೀಡುವ ಬಗ್ಗೆ ಮಾತನಾಡಿದ್ದೇನೆ ಅಂತ ಹೇಳಿದ ಅವರು ಸ್ಕ್ರೀನಿಂಗ್ ಸಮಿತಿ ಸಭೆ ವೇಳೆಯಲ್ಲಿ ಹಾಲಿ ಸಂಸದರ ಕ್ಷೇತ್ರಗಳು ಹೊರತು ಪಡಿಸಿ ಚರ್ಚೆ ಮಾಡುತ್ತೇವೆ. ಇದಲ್ಲದೇ ಜೆಡಿಎಸ್‍ಗೆ ಕಾಂಗ್ರೆಸ್ ಹಾಲಿ ಸಂಸದರ ಸೀಟು ಕೊಡಬಾರದು ಎನ್ನುವುದು ಕೂಡ ಅಂತಿಮವಾಗಲಿದೆ ಅಂತ ತಿಳಿಸಿದರು.

ಇನ್ನು ಸುಮಲತ ಅವರ ಬಗ್ಗೆ ವಿವಾದತ್ಮಕ ಹೇಳಿಕೆ ನೀಡಿದ್ದ ಸಚಿವ ರೇವಣ್ಣನವರ ಹೇಳಿಕೆಗೆ ಸಂಬಂಧಪಟ್ಟಂತೆ ಮಾತನಾಡಿದ ಅವರು ಸುಮಲತಾ ಬಗ್ಗೆ ಸಚಿವ ರೇವಣ್ಣ ಹಾಗೇ ಮಾತನಾಡಬಾರದಿತ್ತು ಅಂತ ಹೇಳಿದರು, ಇನ್ನು ಸುಮಲತಾ ಹಿಂದೆ ನಾನ್ಯಾಕೆ ನಿಂತುಕೊಳ್ಳಲಿ. ಡಿ.ಕೆ ಶಿವಕುಮಾರ್ ಮಂಡ್ಯ ನಾಯಕರ ಜೊತೆ ಸಭೆ ನಡೆಸಿದ್ದು ಗೊತ್ತಿಲ್ಲ. ಸುಮಲತಾ ಪರ ಪ್ರಚಾರ ಮಾಡಿರುವುದು ಗೊತ್ತಿಲ್ಲ ಎಂದರು.

ಫ್ರೆಶ್ ನ್ಯೂಸ್

Latest Posts

Featured Videos