ಸಿದ್ದುಗೆ ಎಚ್ ಡಿಕೆ ತಿರುಗೇಟು

ಸಿದ್ದುಗೆ ಎಚ್ ಡಿಕೆ ತಿರುಗೇಟು

ಬೆಂಗಳೂರು, ಅ. 25 : ಉಪಚುನಾವಣೆ ಕಾಂಗ್ರೆಸ್ 15 ಸೀಟು ಗೆದ್ದರೆ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದ ಸಿದ್ದರಾಮಯ್ಯ ನವರ ಹೇಳಿಕೆಯ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟ್ವೀಟರ್ ನಲ್ಲಿ ಕಿಡಿಕಾರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಸಿದ್ದರಾಮಯ್ಯನವರೇ ಯಾರ ಸಹವಾಸದಿಂದ ಯಾರು ಕೆಟ್ಟರು? ಯಾರು ಯಾರಿಗೆ ಕೇಡು ಬಗೆದರು? ಎಂದು ಆತ್ಮವಂಚನೆ ಇಲ್ಲದೇ ಹೇಳುವಿರಾ? ನಮ್ಮ ಸಹವಾಸ ಮಾಡಿ ಎಂದು ಸಿದ್ದರಾಮಯ್ಯ ಅವರನ್ನು ಬೇಡಿದ್ದು ಯಾರು? ಅವರ ಮನೆ ಬಾಗಿಲಿಗೆ ಹೋಗಿದ್ದು ಯಾರು? ಸಹಕಾರ ಕೊಟ್ಟವರು ಯಾರು?ಪ್ರಕೃತಿ ಚಿಕಿತ್ಸೆಯಲ್ಲಿ ಕೂತು ಕತ್ತಿ ಮಸಿದಿದ್ದು ಯಾರು?ದಿನಕ್ಕೊಬ್ಬರ ಮೂಲಕ ನನ್ನನ್ನು ಟೀಕಿಸಿದ್ದು ಯಾರು ಎಂದು ಎಂದು ಪ್ರಶ್ನಿಸಿದ್ದಾರೆ. ನಿಮ್ಮ ಸಹವಾಸ ನಮಗೂ ಬೇಡ ಎಂದು ಸಿದ್ದರಾಮಯ್ಯನವರಿಗೆ ತಿರುಗೇಟು ನೀಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos