ಸಿದ್ದುಗೆ ಬಿಗ್ ಶಾಕ್!

ಸಿದ್ದುಗೆ ಬಿಗ್ ಶಾಕ್!

ಬೆಂಗಳೂರು, ಆ. 14: ರಾಜ್ಯದಲ್ಲಿ ಅತೃಪ್ತ ಶಾಸಕರು ರಾಜೀನಾಮೆ ಕೊಟ್ಟ ಹಿನ್ನೆಲೆಯೇ ದೋಸ್ತಿ ಸರ್ಕಾರ ಪತನವಾಗಲು ಕಾರಣವಾಯ್ತು.ಇದರ ಬೆನ್ನೆಲೆಯಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ಶಾಕ್ ಒಂದು ಮುಂದಿದೆ. ಹೌದು, ಕಾಂಗ್ರೆಸ್ ಶಾಸಕಾಂಗ ನಾಯಕರಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರತಿಪಕ್ಷದ ನಾಯಕನ ಸ್ಥಾನ ಕೈ ತಪ್ಪುವುದು ಬಹುತೇಕ ಖಚಿತವೆನ್ನಲಾಗಿದೆ.

ಮಾಜಿ ಡಿಸಿಎಂ ಪರಮೇಶ್ವರ್ ಮತ್ತು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಪ್ರತಿಪಕ್ಷದ ನಾಯಕ ಸ್ಥಾನದ ಮೇಲೆ ಕಣ್ಣಿಟ್ಟಿದ್ದು, ಈ ನಿಟ್ಟಿನಲ್ಲಿ ಪ್ರಯತ್ನ ನಡೆಸಿದ್ದಾರೆ. ಸಮ್ಮಿಶ್ರ ಸರ್ಕಾರ ಪತನವಾದ ಬಳಿಕ ಸಿದ್ದರಾಮಯ್ಯ ಅವರೇ ಪ್ರತಿಪಕ್ಷದ ನಾಯಕರಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು.

ಶಾಸಕಾಂಗ ಪಕ್ಷದ ನಾಯಕರಿಗೆ ಪ್ರತಿಪಕ್ಷದ ನಾಯಕನ ಹುದ್ದೆ ನೀಡುವ ಸಾಧ್ಯತೆ ಇರುವುದರಿಂದ ಸಿದ್ದರಾಮಯ್ಯ ಅವರೇ ಪ್ರತಿಪಕ್ಷ ನಾಯಕರಾಗಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಜಿ. ಪರಮೇಶ್ವರ್, ಡಿ.ಕೆ. ಶಿವಕುಮಾರ್ ಮತ್ತು ಹೆಚ್.ಕೆ. ಪಾಟೀಲ್ ಅವರಲ್ಲಿ ಒಬ್ಬರನ್ನು ಪ್ರತಿಪಕ್ಷದ ನಾಯಕನ ಸ್ಥಾನಕ್ಕೆ ಆಯ್ಕೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಸಿದ್ದರಾಮಯ್ಯ ತಮಗೆ ಪ್ರತಿಪಕ್ಷದ ನಾಯಕನ ಸ್ಥಾನ ತಪ್ಪುವ ಬಗ್ಗೆ ತಿಳಿಯುತ್ತಿದ್ದಂತೆ ಶಾಸಕಾಂಗ ನಾಯಕನ ಸ್ಥಾನ ಉಳಿಸಿಕೊಂಡು, ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ಅವರಿಗೆ ಪ್ರತಿಪಕ್ಷದ ನಾಯಕನ ಸ್ಥಾನ ನೀಡಲು ಅವರ ಹೆಸರನ್ನು ಪ್ರಸ್ತಾಪಿಸಿದ್ದರು ಎನ್ನಲಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos