ಹುಬ್ಬಳ್ಳಿ, ಮೇ.15, ನ್ಯೂಸ್ ಎಕ್ಸ್ ಪ್ರೆಸ್ : ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮ್ಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹುಬ್ಬಳಿಯ ಖಾಸಗಿ ಹೋಟೆಲ್ ವೊಂದರಲ್ಲಿ 20 ನಿಮಿಷ ಇದ್ದರೂ ಸಹ ಪರಸ್ಪರ ಭೇಟಯಾಗಿಲ್ಲ ಎಂದು ಮೂಲದಿಂದ ತಿಳಿದು ಬಂದಿದೆ.
ಕುಂದಗೋಳ ಕ್ಷೇತ್ರದ ಉಪಚುನಾವಣೆ ಮೈತ್ರಿ ಸರ್ಕಾರದ ಕಾಂಗ್ರೆಸ್ ಗೆ ಪ್ರತಿಷ್ಠೆ ಕಣವಾಗಿದೆ. ಹೀಗಾಗಿ ಇಂದು ಸಿಎಂ ಕುಮಾರಸ್ವಾಮಿ ಅವರು ಕುಂದಗೋಳದಲ್ಲಿ ಪ್ರಚಾರ ನಡೆಸಲು ಆಗಮಿಸಿದ್ದರು. ಇದೇ ವೇಳೆ ಕುಮಾರಸ್ವಾಮಿ ಅವರು ತಂಗಿದ್ದ ಹೋಟೆಲ್ಗೆ, ಸಿದ್ದರಾಮಯ್ಯ ಆಗಮಿಸಿದ್ದರು. ಆದರೆ ಅವರಿಬ್ಬರು ಒಂದೆ ಕಡೆಯಿದ್ದರು ಸಹ ಪರಸ್ಪರ ಬೇಟಿಯಾಗಿಲ್ಲ. ಉಪಚುನಾವಣೆ ಸಮಯದಲ್ಲಿ ಭೇಟಿಯಾಗದಿರುವುದು, ಮೈತ್ರಿ ಸರ್ಕಾರದಲ್ಲಿ ಬುಗಿಲೆದ್ದ ಭಿನ್ನಾಭಿಪ್ರಾಯಕ್ಕೆ ಮತ್ತಷ್ಟು ಪುಷ್ಠಿ ನೀಡಿದಂತಾಗಿದೆ.
ಮಾಜಿ ಸಿಎಂ ಸಿದ್ದರಾಮಯ್ಯನವರು, ಮಾಜಿ ಸಭಾಪತಿ ಬಸವರಾಜ್ ಹೊರಟ್ಟಿ ಹಾಗೂ ಸಚಿವ ಬಂಡೆಪ್ಪ ಕಾಶಂಪೂರ್ ಸೇರಿದಂತೆ ಹಲವಾರು ನಾಯಕರ ಭೇಟಿ ಮಾಡಿದ್ದಾರೆ. ಇನ್ನೊಂದೆಡೆ ಸಿಎಂ ಕುಮಾರಸ್ವಾಮಿ ಹಾಗೂ ಸಚಿವ ಜಮೀರ್ ಅಹ್ಮದ್ ಪರಸ್ಪರ ಮಾತುಕತೆ ನಡೆಸಿದ್ದಾರೆ ಅಂತಾ ತಿಳಿದು ಬಂದಿದೆ.