ಉಚಿತ ಯೋಜನೆಗಳು ಎಂಬ ತಪ್ಪು ಕಲ್ಪನೆ ಬೇಡ: ಸಿಎಂ

ಉಚಿತ ಯೋಜನೆಗಳು ಎಂಬ ತಪ್ಪು ಕಲ್ಪನೆ ಬೇಡ: ಸಿಎಂ

ಬೆಂಗಳೂರು: ನಮ್ಮ ಪಕ್ಷ ಚುನಾವಣೆ ಪ್ರಣಾಳಿಕೆಯಲ್ಲಿ ನೀಡುವ ಭರವಸೆಯಂತೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಜನರಿಗೆ ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ. ಜನರಿಂದ ಆಯ್ಕೆ ಆದ ಒಂದು ಸರ್ಕಾರದ ಕರ್ತವ್ಯವನ್ನು ಹೇಳಿದ್ದಾರೆ. ಈ ಯೋಜನೆಗಳು ದುರುಪಯೋಗ ಆಗದಂತೆ ಪೂರ್ಣ ಪ್ರಮಾಣದಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕಿರುವುದು ನಿಮ್ಮೆಲ್ಲರ ಕರ್ತವ್ಯ.

ನಿಮ್ಮದೇ ತೆರಿಗೆ ಹಣ, ನಿಮ್ಮದೇ ಕಲ್ಯಾಣ ಕಾರ್ಯಕ್ರಮಗಳು, ಇವು ಉಚಿತ ಯೋಜನೆಗಳು ಎಂಬ ತಪ್ಪು ಕಲ್ಪನೆ ಬೇಡ. ಗ್ಯಾರೆಂಟಿಗಳ ಪ್ರಣಾಳಿಕೆಯು ನಿಮ್ಮ ಬದುಕಿಗೆ ಸದುಪಯೋಗವಾಗಬೇಕು ಎಂದರು. ಚುನಾವಣಾ ಪ್ರಣಾಳಿಕೆಯಲ್ಲಿ ಚುನಾವಣೆ ಪ್ರಚಾರಕ್ಕೆ ಸೀಮಿತಗೊಳಿಸದೆ ಅದನ್ನು ಕಾರ್ಯರೂಪಕ್ಕೆ ತಂದು ಜನರ ಬದುಕಲ್ಲಿ ಅವುಗಳ ಪ್ರತಿಫಲ ಕಾಣಬೇಕೆಂದು  ಆಶಯ.  ನಮ್ಮದು ನಮ್ಮ ಸರ್ಕಾರದ ಸದಾಶಯಕ್ಕೆ ತಮ್ಮೆಲ್ಲರ ಬೆಂಬಲವಿರಲಿ ಗ್ಯಾರಂಟಿ ಗೆಲುವು ಕರ್ನಾಟಕ ಗೆಲುವು ನಮ್ಮೆಲ್ಲರ ಗೆಲುವು ಎಂದು ಸಿದ್ದರಾಮಯ್ಯನವರು ಟ್ವೀಟ್ ಮಾಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos