ಸಿಲಿಕಾನ್‌ ಸಿಟಿಯಲ್ಲಿ ನೀರಿಗಾಗಿ ಪರದಾಟ!

ಸಿಲಿಕಾನ್‌ ಸಿಟಿಯಲ್ಲಿ ನೀರಿಗಾಗಿ ಪರದಾಟ!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬೇಸಿಗೆ ಆರಂಭಕ್ಕೂ ಮುನ್ನವೇ ಕುಡಿಯುವ ನೀರಿಗೆ ಆಹಾಕಾರ ಶುರುವಾಗಿದೆ. ನೀರಿನ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಚರ್ಚಿಸಲು ಸಭೆ ನಡೆಸಲಿದೆ ನಡೆಸಿದೆ ಅಂತರ್ಜಲ ಹೆಚ್ಚಿರುವ ಕಡೆಗಳಲ್ಲಿ ಬೋರ್ ಕಳೆಸುವ ಮೂಲಕ ನೀರಿನ ಅವ್ಯವಸ್ಥೆ ಮಾಡಲಾಗುತ್ತಿದೆ ಎಂದು ಬಿಬಿಎಂಪಿ ಆಯುಕ್ತ ತುಷಾರ್‌ ಗಿರಿನಾಥ್‌ ತಿಳಿಸಿದ್ದಾರೆ.

ಬಿಬಿಎಂಪಿ ಹಾಗೂ ಜಲ ಮಂಡಳಿ ಸಹಯೋಗದಲ್ಲಿ ನೀರಿನ ಸಮಸ್ಯೆ ಬಗ್ಗೆ ಹರಿಸಲು ಕ್ರಮ ಕೈಗೊಳ್ಳಲಾಗುವುದು ಪ್ರಸ್ತುತ 147 ದಶಲಕ್ಷ ಮೀಟರ್ ನೀರು ಲಭ್ಯವಿದೆ. ಮಾರ್ಚ್, ಏಪ್ರಿಲ್, ಮೇ ತಿಂಗಳಲ್ಲಿ ನೀರನ್ನು ಒದಗಿಸಲಾಗುವುದು ಎಂದು ಹೇಳಿದರು.

ಅಂತರ್ಜಲ ಹೆಚ್ಚಿರುವ ಕಡೆಗಳಲ್ಲಿ ಬೋರ್ ಕೊರೆಯುವ ಕೆಲಸ ಮಾಡಲಾಗುತ್ತಿದೆ. ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಕಾವೇರಿ ನೀರು ಒದಗಿಸಲಾಗುವುದು ಎಂದು ತಿಳಿಸಿದ್ದಾರೆ. ಒಟ್ಟು 58 ಕಡೆಗಳಲ್ಲಿ ನೀರಿನ ಸಮಸ್ಯೆ ಕಂಡು ಬಂದಿದೆ. ಅದರಲ್ಲಿ ಆರ್ ಆರ್ ನಗರ ಹಾಗೂ ಮಹದೇವಪುರದಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿ ಕಂಡುಬಂದಿದೆ.

ಫ್ರೆಶ್ ನ್ಯೂಸ್

Latest Posts

Featured Videos