ಸಿಲಿಕಾನ್‌ ಸಿಟಿಯಲ್ಲಿ ಮುಂಗಾರು ಪೂರ್ವ“ಮಾಸಾರ್ಧ ಸ್ವಚ್ಛತಾ ಕಾರ್ಯಕ್ರಮ”

 ಸಿಲಿಕಾನ್‌ ಸಿಟಿಯಲ್ಲಿ ಮುಂಗಾರು ಪೂರ್ವ“ಮಾಸಾರ್ಧ ಸ್ವಚ್ಛತಾ ಕಾರ್ಯಕ್ರಮ”

ಬೆಂಗಳೂರು: ರಾಜ್ಯದಲ್ಲೆ ಬರ ಪರಿಸ್ಥಿತಿ ಆರಂಭವಾಗಿದ್ದು, ಕುಡಿಯಲು ನೀರಿಲ್ಲದೆ ಜನರು ಹಾಗೂ ಪ್ರಾಣಿಗಳು ಪರದಾಟ ನಡೆಸುತ್ತಿದ್ದಾರೆ. ಬಿಸಿಲಿನ ಬೇಗೆಗೆ ದಿನನಿತ್ಯ ಜನರು ಹೈರಾಣಾಗಿದ್ದಾರೆ. ರಾಜ್ಯದಲ್ಲೇ ಕಳೆದ ಮೂರು ನಾಲ್ಕು ದಿನಗಳಿಂದ ತುಂತುರು ಮಳೆ ಯಾಗುತ್ತಿದ್ದು ಇದರಿಂದ ಜನರು ನಿಟ್ಟಿಸಿರು ಬಿಡುವಂತಾಗಿದೆ, ಆದರೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇನ್ನೇನು  ಕೆಲವೇ ದಿನಗಳಲ್ಲಿ ಮುಂಗಾರು ಆರಂಭವಾಗುತ್ತಿದ್ದು, ಮುಂಗಾರಿನಿಂದ ಆಗುವ ಹಾನಿಯನ್ನು ತಡೆಯಲು ಬಿಬಿಎಂಪಿ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತಿದ್ದಾರೆ.

ಹಾಗಾಗಿ ಮಳೆಯಿಂದ ಆಗುವ ಹಾನಿ ತಡೆಗಟ್ಟಲು 15 ದಿನಗಳ ಕಾಲ “ಮಾಸಾರ್ಧ ಸ್ವಚ್ಛತಾ ಕಾರ್ಯಕ್ರಮ” ಹಮ್ಮಿಕೊಳ್ಳಲಾಗಿದೆ. ಈ ಸ್ವಚ್ಛತಾ ಕಾರ್ಯ ನಡೆಸುವ ಕಾರಣ ಆಯಾ ವಲಯ ವ್ಯಾಪ್ತಿಯ ಮುಖ್ಯ ಅಭಿಯಂತರರ ನೇತೃತ್ವದ ತಂಡವು ತಮ್ಮ ಅಧೀನದ ತಾಂತ್ರಿಕ ಸಿಬ್ಬಂದಿಯೊಂದಿಗೆ ದಿನಾಂಕ: 19.04.2024 ರಿಂದ 03.05.2024 ರವರೆಗೆ ಪ್ರತಿನಿತ್ಯ ಮುಂಗಾರು ಪೂರ್ವ “ಮಾಸಾರ್ಧ ಸ್ವಚ್ಛತಾ ಕಾರ್ಯಕ್ರಮ”ಅನ್ನು ಹಮ್ಮಿಕೊಳ್ಳಲು ಸೂಚಿಸಲಾಗಿದೆ.

ಆಯಾ ವಾರ್ಡ್ ಮಟ್ಟದಲ್ಲಿ ಈಗಾಗಲೇ ಗುರುತಿಸಲಾಗಿರುವ ರಾಜಕಾಲುವೆಯ ಸಂಪರ್ಕ ಚರಂಡಿಗಳಿಂದ ಮತ್ತು ಸೂಕ್ಷ್ಮ ಹಾಗೂ ಅತೀ ಸೂಕ್ಷ್ಮ ಪ್ರದೇಶಗಳಿಂದ ಹೂಳೆತ್ತುವುದು. ದಿನನಿತ್ಯ ರಸ್ತೆ ಬದಿಯಲ್ಲಿ ಶೇಖರಣೆಯಾಗುತ್ತಿರುವ ಘನತ್ಯಾಜ್ಯ ಸ್ಥಳಗಳನ್ನು ಸ್ವಚ್ಛಗೊಳಿಸುವುದು.

ವಾರ್ಡ್ ಮಟ್ಟದ ರಸ್ತೆ ಬದಿಯ ತೋಳು ಚರಂಡಿಗಳನ್ನು ಸ್ವಚ್ಛಗೊಳಿಸುವುದು. ಆರ್ಟಿರಿಯಲ್ ಮತ್ತು ಸಬ್ ಆರ್ಟಿರಿಯಲ್ ರಸ್ತೆಗಳ ತೊಳುಚರಂಡಿಗಳನ್ನು ಸ್ವಚ್ಛಗೊಳಿಸುವುದು ಮತ್ತು ರಸ್ತೆ ಮೇಲೆ ಶೇಖರಣೆಯಾಗಿರುವ ಅನುಪಯುಕ್ತ ಕಟ್ಟಡ ತ್ಯಾಜ್ಯಗಳನ್ನು ತೆರೆವುಗೊಳಿಸುವುದು. ಮೇಲ್ಸೇತುವೆ ಮತ್ತು ಕೆಳಸೇತುವೆಗಳನ್ನು ಸ್ವಚ್ಛಗೊಳಿಸಿ ನೀರು ನಿಲ್ಲುವೆಕೆ ಆಗದೆಂಬ ಪ್ರಮಾಣ ಪತ್ರವನ್ನು ಸಲ್ಲಿಸುವುದು. ರಸ್ತೆ ಗುಂಡಿಗಳನ್ನು ದುರಸ್ಥಿ ಪಡಿಸುವುದು.

 

ಫ್ರೆಶ್ ನ್ಯೂಸ್

Latest Posts

Featured Videos