ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಕಾಡುಪ್ರಾಣಿಗಳು ಕಾಡನ್ನು ಬಿಟ್ಟು ನಾಡಿಗೆ ಬರುತ್ತಿದ್ದಾವೆ. ಕಾಡುಪ್ರಾಣಿಗಳು ಆಹಾರ ಹುಡುಕಿಕೊಂಡು ನಾಡಿಗೆ ಬರುತ್ತಿದ್ದಾವೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತ್ಯಕ್ಷವಾಗಿದ್ದು ಜನರಲ್ಲಿ ಆತಂಕ ಮನೆ ಮಾಡಿದೆ. ಬೊಮ್ಮನಹಳ್ಳಿಯ ಕೂಡ್ಲು, ಸಿಂಗಸಂದ್ರ ಬಳಿ ನಿನ್ನೆ ಚಿರತೆ ಪ್ರತ್ಯಕ್ಷವಾಗಿದ್ದು ಬೊಮ್ಮನಹಳ್ಳಿ HSR ಲೇಔಟ್ BTM ಲೇಔಟ್ ನಿವಾಸಿಗಳಲ್ಲಿ ಆತಂಕ ಮನೆ ಮಾಡಿತ್ತು. ಈ ಚಿರತೆಯನ್ನು ಅರಣ್ಯ ಅಧಿಕಾರಿಗಳು ಸೆರೆಯಿಡಿದ್ದರು. ಇದ್ದಾದ ಬಳಿಕ ಬೆಂಗಳೂರಿನಲ್ಲಿ ಮತ್ತೊಂಮ್ಮೆ ಚಿರತೆ ಜನರ ನಿದ್ದೆಗೆಡಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದೆ. ಸೋಲದೇವನಹಳ್ಳಿ, ಹಂದಿಗುಟ್ಟೆ ಗ್ರಾಮಗಳ ಸುತ್ತಮುತ್ತ ಸಾಕು ಪ್ರಾಣಿಗಳ ಮೇಲೆ ಚಿರತೆ ದಾಳಿ ನಡೆಸುತ್ತಿದೆ. ನಿನ್ನೆ ರಾತ್ರಿ ರಾಜಣ್ಣ ಎಂಬುವರ ಅಡಕೆ ತೋಟದಲ್ಲಿ ಚಿರತೆ ಓಡಾಡಿದ್ದು ಮನೆ ಮುಂದೆ ಅಳವಡಿಸಿದ್ದ ಸಿಸಿಟಿವಿಯಲ್ಲಿ ಚಿರತೆ ಚಲನವಲನ ಸೆರೆಯಾಗಿದೆ. ಚಿರತೆ ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರು ಮನವಿ ಮಾಡಿದ್ದಾರೆ. ರಾತ್ರಿ ವೇಳೆ ಓಡಾಡಲು ಗ್ರಾಮಸ್ಥರು ಭಯಪಡುವಂತಾಗಿದೆ.