ಸರಳ ದೇವರಾಜ ಅರಸು ದಿನಾಚಾರಣೆ

  • In State
  • August 19, 2020
  • 48 Views
ಸರಳ ದೇವರಾಜ ಅರಸು ದಿನಾಚಾರಣೆ

ಮಾಲೂರು :ಹಿಂದುಳಿದ ವರ್ಗಗಳ ಅಭಿವೃದ್ಧಿಯ ನೇತಾರ ಮಾಜಿ ಮುಖ್ಯಮಂತ್ರಿ ದಿ.ದೇವರಾಜ್ ಅರಸು ಅವರ ಜಯಂತಿಯನ್ನು ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಆ.೨೦ ರಂದು ಸರಳವಾಗಿ ಆಚರಣೆ ಮಾಡಲಾಗುವುದು ಎಂದು ಶಾಸಕ ಕೆ.ವೈ.ನಂಜೇಗೌಡ ಹೇಳಿದರು.

ಪಟ್ಟಣದ ತಹಸೀಲ್ದಾರ್ ಕಚೇರಿಯ ಸಭಾಂಗಣದಲ್ಲಿ  ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ದಿ.ದೇವರಾಜ್ ಅರಸು ಅವರ ಜಯಂತಿ ಆಚರಣೆ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಜ್ಯದಲ್ಲಿ ಕೊವಿಡ್ ಸೋಂಕು ಹೆಚ್ಚಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಈ ಬಾರಿ ಅರಸು ಅವರ ಜಯಂತಿಯನ್ನು ಸರಳವಾಗಿ ಆಚರಣೆ ಮಾಡಲು ಸರ್ಕಾರ ಆದೇಶ ನೀಡಿದ ಹಿನ್ನಲೆಯಲ್ಲಿ ಎಲ್ಲಾ
ಅಧಿಕಾರಿ ವರ್ಗದವರು ಹಾಗೂ ಜನಪ್ರತಿನಿಧಿಗಳು. ಸಂಘ ಸಂಸ್ಥೆಗಳು. ಸಾರ್ವಜನಿಕರ ಸಭೆಯನ್ನು ಕರೆದು ನಿರ್ಧಾರ ಕೈಗೊಳ್ಳಲಾಗಿದೆ. ಆ.೨೦ ರಂದು ನಡೆಯುವ ದೇವರಾಜ್ ಅರಸು ಅವರ ಜಯಂತಿ ಕಾರ್ಯಕ್ರಮದಲ್ಲಿ ಅರಸು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಗುವುದು. ತಾಲೂಕಿನಲ್ಲಿ ಈ ಬಾರಿಯ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಸರ್ಕಾರಿ, ಅನುದಾನಿತ, ಹಾಗೂ ಖಾಸಗಿ ಶಾಲೆಗಳ ತಲಾ ೫ ವಿದ್ಯಾರ್ಥಿಗಳಿಂತೆ ಒಟ್ಟು ೨೦ ಮಂದಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಅಭಿನಂದನೆ ಹಾಗೂ ಪ್ರೋತ್ಸಾಹ ನೀಡಲಾಗುವುದು. ತಮ್ಮ ವೈಯುಕ್ತಿವಾಗಿ ಪ್ರತಿಯೊಬ್ಬ ವಿದ್ಯಾರ್ಥಿಗೂ ೫ ಸಾವಿರ ರೂ. ನಗದು ನೀಡಲಾಗುವುದು. ದಿ. ದೇವರಾಜ್ ಅರಸು ರವರ ಜೀವನಾಧಾರಿತ ಪುಸ್ತಕಗಳನ್ನು ವಿತರಿಸಿ ಮಕ್ಕಳಲ್ಲಿ ಅವರ ಆದರ್ಶಗಳ ಬಗ್ಗೆ ಅರಿವು ಮೂಡಿಸಲಾಗುವುದು ಎಂದರು.

ಫ್ರೆಶ್ ನ್ಯೂಸ್

Latest Posts

Featured Videos