ಸರಳ ಕನ್ನಡ ರಾಜ್ಯೋತ್ಸವ ಆಚರಣೆ

ಸರಳ ಕನ್ನಡ ರಾಜ್ಯೋತ್ಸವ ಆಚರಣೆ

ಕೋಲಾರ: ಕೊರೋನಾ ಇರುವುದರಿಂದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಸರಳವಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಸಿ.ಸತ್ಯಭಾಮ ತಿಳಿಸಿದರು.
ಜಿಲ್ಲಾಧಿಕಾರಿ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು, 1956 ರಂದು ಮೈಸೂರು ರಾಜ್ಯ ಎಂದು ಉದಯವಾಗಿ 1973 ನವೆಂಬರ್ 1 ರಂದು ಕರ್ನಾಟಕ ರಾಜ್ಯ ಎಂದು ಮರು ನಾಮಕರಣ ಮಾಡಲಾಯಿತು. ಅಂದಿನಿAದ ಇಂದಿನವರೆಗೂ ಕನ್ನಡ ಭಾಷೆಯ ಅಭಿಮಾನವನ್ನು ಇಟ್ಟುಕೊಂಡು ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

ಪ್ರತಿ ವರ್ಷದಂತೆ ಈ ವರ್ಷವು ನಗರದ ಎಂ.ಜಿ.ರಸ್ತೆಯಲ್ಲಿ ಇರುವ ಗಾಂಧಿ ವನದಲ್ಲಿ ಬೆಳಿಗ್ಗೆ 10.00 ಗಂಟೆಗೆ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮ ಪ್ರಾರಂಭಿಸಲಾಗುವುದು. ನಂತರ ವೇದಿಕೆ ಕಾರ್ಯಕ್ರಮ ನಡೆಸಿ ಇಬ್ಬರು ಸಂಪನ್ಮೂಲ ವ್ಯಕ್ತಿಗಳಿಂದ ಕನ್ನಡ ನಾಡು ನುಡಿಯ ಬಗ್ಗೆ ಭಾಷಣ ಮಾಡಿಸಲಾಗುವುದು. ಎಲ್ಲಾ ಸರ್ಕಾರಿ ಕಛೇರಿಗಳು ಶಾಲಾ-ಕಾಲೇಜುಗಳಲ್ಲಿ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಣೆ ಮಾಡಬೇಕು. ಸರ್ಕಾರಿ ಕಛೇರಿ ಕಟ್ಟಡಗಳ ಮೇಲೆ ದೀಪಾಲಂಕಾರ ಮಾಡಬೇಕು. ನವೆಂಬರ್ ತಿಂಗಳಲ್ಲಿ ರಾಜ್ಯೋತ್ಸವದ ಅಂಗವಾಗಿ 3 ದಿನ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಲಾಗುವುದು. ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರದೊAದಿಗೆ ರಾಜ್ಯೋತ್ಸವದಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.
ಭವನೇಶ್ವರಿ ಕನ್ನಡ ಸಂಘದ ಅಧ್ಯಕ್ಷರಾದ ತ್ಯಾಗರಾಜು ಅವರು ಮಾತನಾಡಿ, ಪ್ರತಿ ಬಾರಿಯು ಪಲ್ಲಕ್ಕಿಗಳ ಮೂಲಕ ಅದ್ದೂರಿಯಾಗಿ ಆಚರಿಸುತ್ತಿದ್ದೆವು. ಈ ಬಾರಿ ಕರೋನಾ ಹಿನ್ನೆಲೆ ಪಲ್ಲಕ್ಕಿ ಹಾಗೂ ಮೆರವಣಿಗೆ ಇರುವುದಿಲ್ಲ. ಕೈಗಾರಿಕೆಗಳು, ಕಾರ್ಖಾನೆಗಳು ಹಾಗೂ ಅಂಗಡಿಗಳ ನಾಮಪಲಕಗಳನ್ನು ಕನ್ನಡದಲ್ಲಿ ಹಾಕಿಕೊಳ್ಳಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿಕುಮಾರ್ ಸೇರಿದಂತೆ ವಿವಿಧ ಕನ್ನಡ ಪರ ಸಂಘಟಣೆಗಳ ಮುಖಂಡರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos