ಖ್ಯಾತ ಗಾಯಕಿ  ಮಂಗ್ಲಿ ಕಾರು ಅಪಘಾತ

ಖ್ಯಾತ ಗಾಯಕಿ  ಮಂಗ್ಲಿ ಕಾರು ಅಪಘಾತ

ಬೆಂಗಳೂರು: ತೆಲುಗು ಚಿತ್ರರಂಗದ ಜನಪ್ರಿಯ ಗಾಯಕಿ ಮಂಗ್ಲಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ ಕೀಳಾಗಿದ್ದು ಗಾಯಕಿ ಸೇರಿದಂತೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.

ಬ್ಯಾಕ್ ಟು ಬ್ಯಾಕ್ ಕಾರ್ಯಕ್ರಮಗಳನ್ನು ನೀಡುತ್ತಿದ್ದಾರೆ. ರಂಗಾ ರೆಡ್ಡಿ ಜಿಲ್ಲೆಯ ನಂದಿಗ್ರಾಮ ಕನ್ಹಾ ಆಧ್ಯಾತ್ಮಿಕ ಉತ್ಸವದಲ್ಲಿ ಮಂಗ್ಲಿ ಭಾಗವಹಿಸಿದ್ದರು. ಆ ಬಳಿಕ ಅವರು ಬೆಂಗಳೂರು-ಹೈದರಾಬಾದ್ ಹೈವೇ ಮೂಲಕ ಹೈದರಾಬಾದ್​ಗೆ ಬರುತ್ತಿದ್ದರು. ಶಂಶಾಬಾದ್ ತೊಂಡುಪಲ್ಲಿ ಬಳಿ ಕಾರು ಅಪಘಾತಕ್ಕೆ ಒಳಗಾಗಿದೆ. ನಿನ್ನೆ ತಡರಾತ್ರಿ ಈ ಘಟನೆ ನಡೆದಿದೆ. ಮಂಗ್ಲಿ ಕಾರಿಗೆ ಸಣ್ಣ ಟ್ರಕ್ ಗುದ್ದಿದೆ ಎಂದು ತಿಳಿದು ಬಂದಿದೆ.

ಕಾರಿನಲ್ಲಿ ಇದ್ದ ಎಲ್ಲರಿಗೂ ಸಣ್ಣಪುಟ್ಟ ಗಾಯಗಳು ಆಗಿವೆ. ದಿವ್ಯಾ ಪ್ರಿಯಾ ಎಂಬುವವರು ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಮಂಗ್ಲಿ ಹಾಗೂ ಇತರ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ’ಎಂದು ಬರೆಯಲಾಗಿದೆ.

‘ಪುಷ್ಪ’ಚಿತ್ರದ ಕನ್ನಡ ವರ್ಷನ್​ನಲ್ಲಿ ಬರುವ ‘ಹೂ ಅಂತೀಯಾ ಮಾವ..’ ಹಾಡನ್ನು ಹಾಡಿ ಗಮನ ಸೆಳೆದರು. ನಂತರ ಕನ್ನಡದಲ್ಲಿ ಹಲವು ಹಾಡುಗಳನ್ನು ಹಾಡಿದರು.

ಫ್ರೆಶ್ ನ್ಯೂಸ್

Latest Posts

Featured Videos