ಬೆಂಗಳೂರು, ಸೆ. 6: ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರು ವಿಧಾನಸೌಧದ ಬ್ಯಾಂಕ್ವೆಟ್ ನಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ವತಿಯಿಂದ ಆಯೋಜಿಸಿರುವ ಸರ್. ಎಂ. ವಿಶ್ವೇಶ್ವರಯ್ಯ ಶ್ರೇಷ್ಠ ಉತ್ಪಾದನಾ ಪ್ರಶಸ್ತಿ ಹಾಗೂ ರಾಜ್ಯ ಶ್ರೇಷ್ಠ ರಫ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು, ಪ್ರಶಸ್ತಿ ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಸದಾನಂದಗೌಡ, ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ, ಸಣ್ಣ ಕೈಗಾರಿಕಾ ಇಲಾಖೆ ಕಾರ್ಯದರ್ಶಿ ಮಹೇಶ್ವರ ರಾವ್ ಉಪಸ್ಥಿತರಿದ್ದರು.