ಸಿರಾಜ್ ಬೌಲಿಂಗ್ ಪ್ರದರ್ಶನಕ್ಕೆ ಆಂಗ್ಲರು ತತ್ತರ

ಸಿರಾಜ್ ಬೌಲಿಂಗ್ ಪ್ರದರ್ಶನಕ್ಕೆ ಆಂಗ್ಲರು ತತ್ತರ

ಬೆಂಗಳೂರು: ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ಭರ್ಜರಿ ಬೌಲಿಂಗ್ ಪ್ರದರ್ಶಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 445 ರನ್​ ಕಲೆಹಾಕಿತು. ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡವು 2ನೇ ದಿನದಾಟದ ಅಂತ್ಯಕ್ಕೆ 2 ವಿಕೆಟ್ ಕಳೆದುಕೊಂಡು 207 ರನ್ ಕಲೆಹಾಕಿತ್ತು.

ಅದರಂತೆ ಮೂರನೇ ದಿನದಾಟ ಶುರು ಮಾಡಿದ ಆಂಗ್ಲರನ್ನು ಕಟ್ಟಿ ಹಾಕುವಲ್ಲಿ ಟೀಮ್ ಇಂಡಿಯಾ ಬೌಲರ್​ಗಳು ಯಶಸ್ವಿಯಾಗಿದ್ದಾರೆ. ಅದರಲ್ಲೂ ಕರಾರುವಾಕ್ ದಾಳಿ ಸಂಘಟಿಸಿದ ಮೊಹಮ್ಮದ್ ಸಿರಾಜ್ 21.1 ಓವರ್​ಗಳಲ್ಲಿ 84 ರನ್ ನೀಡಿ 4 ವಿಕೆಟ್ ಕಬಳಿಸಿದರು. ಈ ಮೂಲಕ ಇಂಗ್ಲೆಂಡ್ ತಂಡ 319 ರನ್​ಗಳಿಗೆ ಆಲೌಟ್ ಆಗುವಲ್ಲಿ ಪ್ರಮುಖ ಪಾತ್ರವಹಿಸಿದರು.

ವಿಶೇಷ ಎಂದರೆ ಈ ನಾಲ್ಕು ವಿಕೆಟ್​ಗಳೊಂದಿಗೆ ಮೊಹಮ್ಮದ್ ಸಿರಾಜ್ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 150 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಭಾರತದ 33ನೇ ಬೌಲರ್​ ಎನಿಸಿಕೊಂಡಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos