ಖ್ಯಾತ ಜ್ಯೋತಿಷಿ ಎಸ್.ಕೆ.ಜೈನ್ ನಿಧನ

ಖ್ಯಾತ ಜ್ಯೋತಿಷಿ ಎಸ್.ಕೆ.ಜೈನ್ ನಿಧನ

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಜ್ಯೋತಿಷಿ ಎಸ್.ಕೆ.ಜೈನ್ (66) ಅವರು ನಿನ್ನೆ ಸಂಜೆ ನಿಧನರಾಗಿದ್ದಾರೆ. ಅನಾರೋಗ್ಯ ಹಿನ್ನೆಲೆ ಮಾರ್ಚ್ 18ರಂದು ಎಸ್.ಕೆ.ಜೈನ್‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಮತ್ತೆ ಏಪ್ರಿಲ್‌ನ ಮೊದಲನೇ ವಾರದಲ್ಲೇ ಡಿಸ್ಚಾರ್ಜ್‌ ಮಾಡಲಾಯಿತು. ಮತ್ತೆ ನಾಲ್ಕು ದಿನಗಳ ಹಿಂದೆ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ನಿನ್ನೆ ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ ಎನ್ನುವ ಮಾಹಿತಿ

ಶ್ವಾಸಕೋಶದಲ್ಲಿ ನೀರು ಶೇಖರಣೆಯಾಗಿ ದೇಹಕ್ಕೆಲ್ಲಾ ಹರಡಿದ್ದರಿಂದ ಮಾರ್ಚ್ 18ರಂದು ಸಂಜೆ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನಂತರ ಕನ್ನಿಂಗ್‌ಹ್ಯಾಮ್ ರಸ್ತೆಯಲ್ಲಿರುವ ಫೋರ್ಟಿಸ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಯಿತು. ಇನ್ನು ಮತ್ತೆ ಏಪ್ರಿಲ್ ಎರಡನೇ ವಾರದಲ್ಲಿ ಅವರನ್ನು ಡಿಸ್ಚಾರ್ಜ್ ಮಾಡಲಾಗಿತ್ತು.

ಆದರೆ ಮತ್ತೆ ಅಸ್ವಸ್ಥರಾಗಿದ್ದರಿಂದ ಅವರನ್ನು 4 ದಿನಗಳ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಿಳಿರಕ್ತ ಕಣಗಳು ಕಡಿಮೆಯಾಗಿ, ಲೋ ಬಿಪಿ ಆಗಿದ್ದರಿಂದ ಸೋಂಕು ದೇಹದ ಇತರ ಭಾಗಗಳಿಗೆ ಹರಡಿ ಜೈನ್ ಅವರು ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos