ಮಳೆ; ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಮಸ್ಯೆ ಬಗೆಹರಿಸಿ

ಮಳೆ; ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಮಸ್ಯೆ ಬಗೆಹರಿಸಿ

ಬೆಂಗಳೂರು: ನಗರದಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಗುರುತಿಸಿರುವಂತಹ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಮಸ್ಯೆಗಳನ್ನು ಬಗೆಹರಿಸಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪಾಲಿಕೆ ಕೇಂದ್ರ ಕಛೇರಿಯಲ್ಲಿ ಇಂದು (ಸೋಮವಾರ ಮೇ 26) ರಂದುನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಮಳೆಗಾಲದ ವೇಳೆ ಪ್ರತಿ ವಲಯದ ಎಲ್ಲಾ ಅಧಿಕಾರಿಗಳು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಲು ಸೂಚನೆ ನೀಡಿದರು.

ಮಳೆಗಾಲದ ವೇಳೆ ರಾಜ ಕಾಲುವೆಗಳಲ್ಲಿ ಸರಾಗವಾಗಿ ನೀರು ಹರಿದು ಹೋಗುವಂತೆ ಮಾಡಬೇಕು. ಈ ನಿಟ್ಟಿನಲ್ಲಿ ರಾಜಕಾಲುವೆ ವಿಭಾಗದಿಂದ ನಿರಂತರವಾಗಿ ಹೂಳು ತೆಗದು ಸ್ವಚ್ಛತೆ ಕಾಪಾಡುವ ಕೆಲಸ ಮಾಡಬೇಕು. ಇನ್ನು ಆರ್‌.ಸಿ.ಸಿ ತಡೆಗೋಡೆ ನಿರ್ಮಾಣ ಮಾಡದ ರಾಜಕಾಲುವೆಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜಲಾವೃತವಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸದರು.

ನಗರದಲ್ಲಿ 210 ಪ್ರವಾಹ ಪೀಡಿತ ಪ್ರದೇಶಗಳ ಪೈಕಿ ಈಗಾಗಲೇ 166 ಕಡೆ ಸಮಸ್ಯೆಯನ್ನು ಬಗೆಹರಿಸಲಾಗಿದ್ದು, ವಲಯ ಆಯುಕ್ತರು ಅವುಗಳಿಗೆ ದೃಡೀಕರಣ ಮಾಡಿ ನೀಡಬೇಕು. ಇನ್ನು ಬಾಕಿಯಿರುವ 44 ಸ್ಥಳಗಳಲ್ಲಿ ಕೂಡಲೇ ತಾತ್ಕಾಲಿಕ ಕ್ರಮ ಕೈಗೊಳ್ಳುವುದರ ಜೊತೆಗೆ ಶಾಶ್ವರ ಪರಿಹಾರ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

ಮಳೆಗಾಲದ ವೇಳೆ ರಸ್ತೆಗಳ ಮೇಲೆ ನೀರು ನಿಂತು ಸಂಚಾರ ದಟ್ಟಣೆ ಹೆಚ್ಚುವ ಸ್ಥಳಗಳ ಪಟ್ಟಿಯನ್ನು ಸಂಚಾರ ಪೊಲೀಸ್ ವಿಭಾಗದವರು ನೀಡಿದ್ದು, ಅಂತಹ ಸ್ಥಳಗಳಲ್ಲಿ ನೀರು ನಿಲ್ಲದಂತೆ ಕ್ರಮವಹಿಸಬೇಕು. ಜೊತೆಗೆ ರಸ್ತೆ ಬದಿಯ ಚರಂಡಿ/ಶೋಲ್ಡರ್ ಡ್ರೈನ್‌ಗಳಲ್ಲಿ ಹೂಳು ತೆಗೆಯುವಿಕೆ ಮತ್ತು ಶುಚಿಗೊಳಿಸುವಿಕೆ ಕಾರ್ಯ ನಿರಂತರವಾಗಿ ಮಾಡಲು ತಿಳಿಸಿದರು.

ಸ್ಲೂಯಿಸ್ ಗೇಟ್ ಅಳವಡಿಕೆಗೆ ಕ್ರಮ

ಪಾಲಿಕೆ ಅಧೀನದಲ್ಲಿ 183 ಕೆರೆಗಳು ಬರಲಿದ್ದು, ಈ ಪೈಕಿ 13 ಕೆರೆಗಳಿಗೆ ಸ್ಲೂಯಿಸ್ ಗೇಟ್ ಗಳನ್ನು ಅಳವಡಿಸಲಾಗಿದೆ. ಸ್ಲೂಯಿಸ್ ಗೇಟ್ ಅಳವಡಿಸುವ ಕೆರೆಗಳಲ್ಲಿ ನೀರು ತುಂಬಿದ್ದರೆ ನೀರಿನ ಮಟ್ಟವನ್ನು ಕಡಿಮೆ ಮಾಡಿ ಮಳೆ ನೀರು ತುಂಬಲು ಅನುವಾಗುವಂತೆ ಮಾಡಬೇಕು. ಅದಲ್ಲದೆ ಉಳಿದ ಕೆರೆಗಳಿಗೂ ಹಂತ-ಹಂತವಾಗಿ ಸ್ಲೂಯಿಸ್ ಗೇಟ್ ಗಳನ್ನು ಅಳವಡಿಸಲು ಹಾಗೂ ಹೂಳು ತೆರವುಗೊಳಿಸದ ಕೆರೆಗಳಲ್ಲಿ ಹೂಳು ತೆರವು ಮಾಡುವ ವಿಚಾರವಾಗಿ ಯೋಜನೆ ರೂಪಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos