ಗೆಲುವಿಗಾಗಿ ಸೋನಿಯಾರಿಂದ ಹೋಮ-ಹವನ, ವಿಶೇಷ ಪೂಜೆ!

ಗೆಲುವಿಗಾಗಿ ಸೋನಿಯಾರಿಂದ ಹೋಮ-ಹವನ, ವಿಶೇಷ ಪೂಜೆ!

ರಾಯಬರೇಲಿ, ಏ. 11, ನ್ಯೂಸ್ ಎಕ್ಸ್ ಪ್ರೆಸ್: ಉತ್ತರಪ್ರದೇಶದ ರಾಯಬರೇಲಿ ಲೋಕಸಭಾ ಕ್ಷೇತ್ರದಿಂದ ಸೋನಿಯಾ ಸ್ಪರ್ಧೆ ಮಾಡುತ್ತಿದ್ದು, ಇಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಎಐಸಿಸಿ ಮಾಜಿ ಅಧ್ಯಕ್ಷೆ, ಕಾಂಗ್ರೆಸ್​ ವರಿಷ್ಠೆ ಸೋನಿಯಾ ಗಾಂಧಿ ಇಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ತಮ್ಮ ಲೋಕಸಭಾ ಕ್ಷೇತ್ರ ರಾಯಬರೇಲಿಯಿಂದ ಕಣಕ್ಕಿಳಿಯುವ ಸೋನಿಯಾ ನಾಮಪತ್ರ ಸಲ್ಲಿಕೆಗೂ ಮುನ್ನ ದೇವರ ಮೊರೆ ಹೋಗಿದ್ದು, ವಿಶೇಷ ಹೋಮ-ಹವನ ನಡೆಸಿದರು. ನಿನ್ನೆ ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ಅಮೇಠಿಯಿಂದ ನಾಮಪತ್ರ ಸಲ್ಲಿಕೆ ಮಾಡಿದ್ದು, ಇಂದು ಕಾಂಗ್ರೆಸ್​ ವರಿಷ್ಠೆ ಸೋನಿಯಾ ಗಾಂಧಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಅದಕ್ಕೂ ಮುನ್ನ ನಡೆದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಮಗ ರಾಹುಲ್​ ಗಾಂಧಿ,ಪುತ್ರಿ ಪ್ರಿಯಾಂಕಾ ಗಾಂಧಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಇಂದು ಬೆಳಗ್ಗೆ ನಾಮಪತ್ರ ಸಲ್ಲಿಕೆ ಮಾಡುವುದಕ್ಕೂ ಮೊದಲು ಬಿಜೆಪಿಯ ಸೋನಿಯಾ ಗಾಂಧಿ ವಿಶೇಷ ಪೂಜೆ ನಡೆಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos