ಡಿಕೆಶಿಗಿಲ್ಲ ಸೋನಿಯಾ ದರ್ಶನ ಭಾಗ್ಯ

ಡಿಕೆಶಿಗಿಲ್ಲ ಸೋನಿಯಾ ದರ್ಶನ ಭಾಗ್ಯ

ನವದೆಹಲಿ , ಸೆ. 23 : ರಾಜ್ಯದ ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಹಾಗೂ ಚಿದಂಬರಂ ಇಬ್ಬರೂ ಒಂದೇ ಕಾರಾಗೃಹದಲ್ಲಿದ್ದಾರೆ.  ಜೈಲು ಸೇರಿರುವ ತಮ್ಮ ಪಕ್ಷದ ಇಬ್ಬರು ಪ್ರಭಾವಿ ನಾಯರನ್ನು ಭೇಟಿಯಾಗಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ತಿಹಾರ್ ಜೈಲಿಗೆ ಆಗಮಿಸಿ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರನ್ನು ಭೇಟಿಯಾಗಲಷ್ಟೆ ಸಾಧ್ಯವಾಯಿತ್ತು. ರಾಜ್ಯದ ಮಾಜಿ ಸಚಿವ ಡಿಕೆ ಶಿವಕುಮಾರ ಅವರಿಗೆ ಸೋನಿಯಾ ಮತ್ತು ಮಾಜಿ ಪ್ರಧಾನಿ ಮನಮೋಹನ ಸಿಂಗ್ ಭಾಗ್ಯ ಸಿಗಲಿಲ್ಲ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಅವರನ್ನು ಐಎನ್ಎಕ್ಸ್ ಮೀಡಿಯಾ ಹಗರಣದಲ್ಲಿ ಸೆರೆವಾಸದಲ್ಲಿದ್ದರೆ, ಮಾಜಿ ಸಚಿವ ಡಿಕೆ ಶಿವಕುಮಾರ್ ಅವರು ಅಕ್ರಮ ಹಣ ವರ್ಗಾವಣೆ, ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನವನ್ನೆದುರಿಸುತ್ತಿದ್ದಾರೆ.
ಸೋನಿಯಾ ಗಾಂಧಿ ಅವರು ತಿಹಾರ ಜೈಲಿನ ತೆರಳಿ ಪಿ ಚಿದಂಬರಂ ಅವರನ್ನು ಭೇಟಿ ಮಾಡಿದ್ದಕ್ಕೆ ಕಾರ್ತಿ ಚಿದಂಬರಂ ಸಂತಸ ವ್ಯಕ್ತ ಪಡಿಸಿದ್ದಾರೆ, ಸೋನಿಯಾ ಗಾಂಧಿ ಭೇಟಿಯಿಂದಾಗಿ ನಮ್ಮ ರಾಜಕೀಯ ಹೋರಾಟಕ್ಕೆ ಮತ್ತಷ್ಟು ನೈತಿಕ ಬೆಂಬಲ ಸಿಕ್ಕಿದಂತಾಗಿದೆ ಎಂದು ಕಾರ್ತಿ ಚಿದಂಬರಂ ತಿಳಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos