ಶೀಘ್ರದಲ್ಲೇ ವಿಷ್ಣು ಸ್ಮಾರಕ

ಶೀಘ್ರದಲ್ಲೇ ವಿಷ್ಣು ಸ್ಮಾರಕ

ಚಿತ್ರದುರ್ಗ, ಡಿ. 22: ಇಂದು ಜೊತೆ ಜೊತೆಯಲಿ ತಂಡ ಚಿತ್ರದುರ್ಗಕ್ಕೆ ಆಗಮಿಸಿದ್ದು, ವಿಷ್ಣು ಅಪ್ಪಾಜಿಯವರು ಹುಟ್ಟಿದ್ದೇ ಈ ಚಿತ್ರದುರ್ಗದಲ್ಲಿ. ನಾಗರಹಾವು ಸಿನಿಮಾ ಮೂಲಕ, ಸಂಪತ್ ಕುಮಾರ್ ವಿಷ್ಣುವರ್ಧನ್ ಆದರು. ಅವರಿಗೆ ನೀಡಿದ ಪ್ರೀತಿ-ವಿಶ್ವಾಸ, ಅಭಿಮಾನ ನಮ್ಮ ಕುಟುಂಬದ ಮೇಲೆ ಸದಾ ಹೀಗೇ ಇರಲಿ. ಧಾರಾವಾಹಿ ಇತಿಹಾಸದಲ್ಲೇ ಜೊತೆ ಜೊತೆಯಲ್ಲಿ ಧಾರಾವಾಹಿ ಅತ್ಯಂತ ಯಶಸ್ವಿಯಾಗಿ ನಿಮ್ಮೆಲ್ಲರ ಮನಸ್ಸು ಗೆದ್ದಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬಳಿ ಈ ಬಗ್ಗೆ ಚರ್ಚೆ ನಡೆಸಲಾಗಿದ್ದು, ಸ್ಮಾರಕ ನಿರ್ಮಾಣಕ್ಕೆ ಸ್ಪಂದನೆ ಸಿಕ್ಕಿದೆ. ವಿಷ್ಣು ಸ್ಮಾರಕಕ್ಕೆ ಮೈಸೂರಿನಲ್ಲಿ ಸ್ಥಳ ನಿಗದಿಯಾಗಿದ್ದು, ಶೀಘ್ರದಲ್ಲೇ ಸ್ಮಾರಕದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಜೊತೆ ಜೊತೆಯಲ್ಲಿ ಧಾರಾವಾಹಿ ಖ್ಯಾತಿಯ ಅನಿರುದ್ಧ ತಿಳಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos