ನ್ಯೂಝಿಲೆಂಡ್ ವಿರುದ್ಧ ಸೌತ್ ಆಫ್ರಿಕಾಗೆ ಭರ್ಜರಿ ಜಯ

ನ್ಯೂಝಿಲೆಂಡ್ ವಿರುದ್ಧ ಸೌತ್ ಆಫ್ರಿಕಾಗೆ ಭರ್ಜರಿ ಜಯ

ಬೆಂಗಳೂರು: ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿ ಕುತೂಹಲ ಕೆರಳಿಸುತ್ತಿದೆ. ನಿನ್ನೆ ನ್ಯೂಝಿಲೆಂಡ್ -ಸೌತ್ ಆಫ್ರಿಕಾ ತಂಡವನ್ನು ಎದುರಿಸಿತ್ತು. ಸೆಮೀಸ್‌ ರೇಸಲ್ಲಿ ಉಳಿಯಲು ನ್ಯೂಝಿಲೆಂಡ್ -ಸೌತ್ ಆಫ್ರಿಕಾ ಕಾದಾಟ.

ಏಕದಿನ ವಿಶ್ವಕಪ್​ನ 32ನೇ ಪಂದ್ಯದಲ್ಲಿ ನ್ಯೂಝಿಲೆಂಡ್ ವಿರುದ್ಧ ಸೌತ್ ಆಫ್ರಿಕಾ ಭರ್ಜರಿ ಜಯ ಸಾಧಿಸಿದೆ. ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡದ ಹಂಗಾಮಿ ನಾಯಕ ಟಾಮ್ ಲಾಥಮ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ಪರ ಕ್ವಿಂಟನ್ ಡಿಕಾಕ್ (114) ಹಾಗೂ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ (133) ಭರ್ಜರಿ ಶತಕ ಸಿಡಿಸಿದ್ದರು. ಈ ಶತಕಗಳ ನೆರವಿನೊಂದಿಗೆ ಸೌತ್ ಆಫ್ರಿಕಾ ತಂಡವು ನಿಗದಿತ 50 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 357 ರನ್ ಕಲೆಹಾಕಿತು.

358 ರನ್​ಗಳ ಕಠಿಣ ಗುರಿ ಪಡೆದ ನ್ಯೂಝಿಲೆಂಡ್ ತಂಡವನ್ನು 35.3 ಓವರ್​ಗಳಲ್ಲಿ ಕೇವಲ 167 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಸೌತ್ ಆಫ್ರಿಕಾ ಬೌಲರ್​ಗಳು ಯಶಸ್ವಿಯಾಗಿದ್ದಾರೆ. ಈ ಮೂಲಕ ಸೌತ್ ಆಫ್ರಿಕಾ ತಂಡ 190 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಈ ಗೆಲುವಿನೊಂದಿಗೆ 12 ಅಂಕಗಳೊಂದಿಗೆ ಸೌತ್ ಆಫ್ರಿಕಾ ತಂಡ ಪಾಯಿಂಟ್ಸ್​ ಟೇಬಲ್​ನಲ್ಲಿ ಅಗ್ರಸ್ಥಾನವನ್ನು ಅಲಂಕರಿಸಿದೆ. ಇತ್ತ ಸೋಲಿನ ಹೊರತಾಗಿಯೂ ನ್ಯೂಝಿಲೆಂಡ್ ತಂಡ 8 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.

 

ಫ್ರೆಶ್ ನ್ಯೂಸ್

Latest Posts

Featured Videos