ಕನ್ನಡದ ಬಗ್ಗೆ ವಿಶೇಷ ಕಾಳಜಿ ಹೊಂದಬೇಕು

ಕನ್ನಡದ ಬಗ್ಗೆ ವಿಶೇಷ ಕಾಳಜಿ ಹೊಂದಬೇಕು

ಕೆ.ಆರ್.ಪುರ, ಡಿ, 03: ರಾಮಮೂರ್ತಿನಗರದ ಕಾಮಧೇನು ಬಡಾವಣೆಯಲ್ಲಿ ವರನಟ ಡಾ.ರಾಜಕುಮಾರ್ ಅಭಿಮಾನಿಗಳ ಸಂಘದಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಾಜಿ ನಗರ ಸಭಾ ಸದಸ್ಯ ಬಾಕ್ಸರ್ ನಾಗರಾಜ್ ಕನ್ನಡ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ರಾಜ್ಯೋತ್ಸವದ ಅಂಗವಾಗಿ ಬಡಾವಣೆಯ ಹಿರಿಯ ನಿವಾಸಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಸಂಘದ ವತಿಯಿಂದ ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಕೂಡ ನೆರವೇರಿಸಿದರು.

ಮಾಜಿ ನಗರಸಭಾ ಸದಸ್ಯ ಬಾಕ್ಸರ್ ನಾಗರಾಜ್ ಮಾತನಾಡಿ, ಪ್ರತಿಯೊಬ್ಬರು ಕನ್ನಡದ ಬಗ್ಗೆ ವಿಶೇಷ ಕಾಳಜಿ ಹೊಂದಬೇಕು. ಬೆಂಗಳೂರು ನಗರ ಹಲವು ಭಾಷಿಕರನ್ನು ಹೊಂದಿದೆ. ಕನ್ನಡ ರಾಜ್ಯೋತ್ಸವ ಪ್ರತಿದಿನ ಆಚರಿಸುವಂತದಾಗ ಮಾತ್ರ ಕನ್ನಡ ಉಳಿಯುತ್ತದೆ ಎಂದರು.

ವರನಟ ಡಾ.ರಾಜಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಮುರುಳಿ ಮಾತನಾಡಿ, ಪ್ರತಿವರ್ಷದಂತೆ ಈ ವರ್ಷ ಅನ್ನಸಂತರ್ಪಣೆ ಮಾಡುವ ಮೂಲಕ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಿದ್ದೇವೆ. ಬಡಾವಣೆಯ ಹಿರಿಯ ನಾಗರೀಕರಿಗೆ ಸನ್ಮಾನಿಸಿ ಗೌರವಿಸಲಾಗಿದೆ ಎಂದರು.

ಫ್ರೆಶ್ ನ್ಯೂಸ್

Latest Posts

Featured Videos