ಏಪ್ರಿಲ್ 12ರಂದು ಶ್ರೀರಾಮುಲು ನಾಮಪತ್ರ ಸಲ್ಲಿಕೆ

ಏಪ್ರಿಲ್ 12ರಂದು ಶ್ರೀರಾಮುಲು ನಾಮಪತ್ರ ಸಲ್ಲಿಕೆ

ಬೆಂಗಳೂರು: ಏ. 26 ರಂದು ಚುನಾವಣೆ ನಡೆಯುವ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಿನ್ನೆಯಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಏ. 26 ರಂದು ಚುನಾವಣೆ ನಡೆಯಲಿದ್ದು, ಈ ಚುನಾವಣೆಗೆ ಇಂದು ಅಧಿಸೂಚನೆ ಹೊರಡಿಸಲಾಗಿದ್ದು, ನಾಮಪತ್ರ ಸಲ್ಲಿಕೆ ಭರಾಟೆ ನಿನ್ನೆಯಿಂದ ಆರಂಭವಾಗಿದೆ.

ಲೋಕಸಭೆ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಏಪ್ರಿಲ್ 12 ರಂದು ನಾಮಪತ್ರ ಸಲ್ಲಿಸುವುದಾಗಿ ಬಳ್ಳಾರಿ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ಅವರು ಗುರುವಾರ ಹೇಳಿದ್ದಾರೆ. ಕ್ಷೇತ್ರದಲ್ಲಿ ಮೇ 7 ರಂದು ಮತದಾನ ನಡೆಯಲಿದೆ.

ಕಾಂಗ್ರೆಸ್ ಇನ್ನೂ ತನ್ನ ಅಭ್ಯರ್ಥಿಯನ್ನು ಘೋಷಿಸದಿದ್ದರೂ, ಸಂಡೂರು ಶಾಸಕ ಇ ತುಕಾರಾಂ ಪಕ್ಷದ ಕಾರ್ಯಕರ್ತರೊಂದಿಗೆ ನಿಯಮಿತವಾಗಿ ಸಭೆ ನಡೆಸುತ್ತಿದ್ದು, ಪಕ್ಷದ ಟಿಕೆಟ್ ಸಿಗುವ ಸಾಧ್ಯತೆ ಎಂದು ಮೂಲಗಳು ತಿಳಿಸಿವೆ.

ಬಲ್ಲ ಮೂಲಗಳ ಪ್ರಕಾರ, ತುಕಾರಾಂ ಅವರು ತಮ್ಮ ಪುತ್ರಿಗೆ ಟಿಕೆಟ್ ಕೊಡಿಸಲು ಯತ್ನ ನಡೆಸಿದ್ದರು. ಆದರೆ, ಸಚಿವ ಸಂತೋಷ್ ಲಾಡ್ ಅವರು ತುಕಾರಾಂ ಅವರನ್ನೇ ಕಣಕ್ಕಿಳಿಯುವಂತೆ ಮನವೊಲಿಸಿದ್ದಾರೆ ಎಂದು ತಿಳಿಸಿವೆ.

ಈ ನಡುವೆ ಹೇಳಿಕೆ ನೀಡಿರುವ ಶ್ರೀರಾಮುಲು ಅವರು, ಏಪ್ರಿಲ್ 12 ರಂದು ನಾಮಪತ್ರ ಸಲ್ಲಿಸುತ್ತೇನೆ. ಇದಕ್ಕೂ ಪೂರ್ವದಲ್ಲಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಪ್ರತೀ ವಿಧಾನಸಭೆ ಕ್ಷೇತ್ರಕ್ಕೆ ಭೇಟಿ ನೀಡಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಸಭೆ ನಡೆಸುವೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ಗೆಲ್ಲುವ ವಿಶ್ವಾಸವಿಲ್ಲ. ಹೀಗಾಗಿಯೇ ಅಭ್ಯರ್ಥಿಯನ್ನು ಘೋಷಣೆ ಮಾಡುವಲ್ಲಿ ವಿಳಂಬ ಮಾಡುತ್ತಿದೆ. ಈ ಬಾರಿ ಗೆಲ್ಲುವ ವಿಶ್ವಾಸವಿದ. ಪ್ರಧಾನಿ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯಾಗಿ ನೋಡಬೇಕೆಂದು ಬಯಸಿರುವ ಕ್ಷೇತ್ರದ ಜನತೆ ನನ್ನನ್ನು ಸಂಸದನಾಗಿ ಮಾಡಲು ನಿರ್ಧರಿಸಿದ್ದೇನೆ. ಈ ಹಿಂದೆ ಸಚಿವನಾಗಿ ನಾನು ಮಾಡಿರುವ ಕೆಲಸಗಳೇ ನನ್ನ ಗೆಲುವಿಗೆ ನೆರವಾಗಲಿದೆ ಎಂದು ತಿಳಿಸಿದರು.

 

ಫ್ರೆಶ್ ನ್ಯೂಸ್

Latest Posts

Featured Videos