ಬೆಂಗಳೂರು, ಸೆ. 3: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು, ಅಕ್ರಮ ಹಣ ಹೊಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ವಿಚಾರಣೆಗೆ ಒಳಪಟ್ಟಿರುವ ಅವರು ಕಣ್ಣೀರು ಹಾಕಿದ್ದರು. ಈ ವೇಳೆ ಉಪ್ಪು ತಿಂದವರು ನೀರು ಕುಡಿಯಲೇ ಬೇಕು ಎಂದು ಹೇಳಿಕೆ ನೀಡಿದ್ದ ಶ್ರೀರಾಮುಲು ಇದೀಗ ಡಿಕೆಶಿ ಕ್ಷಮೆ ಯಾಚಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಶ್ರೀರಾಮುಲು, ನನ್ನ ಮಾತಿನಿಂದ ನೋವಾಗಿದ್ದರೆ ಡಿಕೆಶಿ ಅಣ್ಣನವರೇ ಕ್ಷಮಿಸಿ, ಕೈ ಮುಗಿದು ಕೇಳುತ್ತೇನೆ. ನನ್ನನ್ನು ಕ್ಷಮಿಸಿ, ನನ್ನ ಭಾಷೆ ರಾಜಕಾರಣಕ್ಕೆ ಸೀಮಿತವೇ ಹೊರತು ವೈಯಕ್ತಿಕ ಅಲ್ಲ, ಡಿಕೆಶಿ ಅಣ್ಣನಿಗೆ ರಾಜಕೀಯವಾಗಿ ಮಾತ್ರ ಮಾತನಾಡಿದ್ದು ಎಂದು ಹೇಳಿದ್ದಾರೆ.