ರಾಜ್ಯದಲ್ಲಿ ಮಾ.25 ರಿಂದ ‘SSLC’ ಪರೀಕ್ಷೆ ಆರಂಭ!

ರಾಜ್ಯದಲ್ಲಿ ಮಾ.25 ರಿಂದ ‘SSLC’ ಪರೀಕ್ಷೆ ಆರಂಭ!

ಬೆಂಗಳೂರು: ಪ್ರಸುತ್ತ ಶೈಕ್ಷಣಿಕ ಸಾಲಿನ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆ ನಡೆಯುವ ಕೇಂದ್ರಗಳಲ್ಲಿ ಸಿಸಿಟಿವಿಯನ್ನು ಕಡ್ಡಾಯಗೊಳಿಸಲಾಗಿದೆ. ಎಸ್‍ಎಸ್‍ಎಲ್‍ಸಿ 2023-24 ನೇ ಸಾಲಿನ ವಾರ್ಷಿಕ ಮೊದಲ ಪರೀಕ್ಷೆಯು ಮಾ.25 ರಿಂದ ಏ.6 ರವರೆಗೆ ನಡೆಯಲಿದೆ. ಪರೀಕ್ಷೆ ನಡೆಯುವ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ದೇಶನ ನೀಡಿದೆ.

ಮಾ.25 ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭವಾಗಲಿದ್ದು, ಶಿಕ್ಷಣ ಇಲಾಖೆ ಪರೀಕ್ಷೆ ನಡೆಸಲು ಸಕಲ ಸಿದ್ದತೆ ಮಾಡಿಕೊಂಡಿದೆ. ಮಕ್ಕಳು ಕೂಡ ಪರೀಕ್ಷೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ.

ಎಸ್.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ಹಾಜರಾಗುತ್ತಿರುವ ವಿದ್ಯಾರ್ಥಿಗಳ ಅಂತಿಮ ಪ್ರವೇಶ ಪತ್ರಗಳನ್ನು ಮಂಡಳಿಯ ಜಾಲತಾಣದ ಶಾಲಾ ಲಾಗಿನ್ನಲ್ಲಿ ಅಪ್ಲೋಡ್ ಮಾಡಲಾಗಿದ್ದು, ವಿದ್ಯಾರ್ಥಿಗಳು ಶಾಲೆಯಲ್ಲಿ ಹಾಲ್ ಟಿಕೆಟ್ ಪಡೆಯಬಹುದಾಗಿದೆ.

ಒಂದು ವೇಳೆ ಹಾಲ್ ಟಿಕೆಟ್ ನಲ್ಲಿ ಹೆಸರು, ರೋಲ್ ನಂ, ವಿಳಾಸ ತಪ್ಪಾಗಿ ಮುದ್ರಣವಾಗಿದ್ರೆ ಕೂಡಲೇ ಶಾಲಾ ಮುಖ್ಯೋಪಾಧ್ಯಾಯರ ಗಮನಕ್ಕೆ ತರಬೇಕು.

ಮಾರ್ಚ್ 25 ರಿಂದ ಏಪ್ರಿಲ್ 6ರವರೆಗೆ ಎಸ್‌ಎಸ್‌ಎಲ್ಸಿ ಪರೀಕ್ಷೆ ನಡೆಯಲಿದ್ದು, ಎಸ್‌ಎಸ್‌ಎಲ್ಸಿ ಪರೀಕ್ಷೆಗೆ ಒಟ್ಟು 8,96,271 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ. 4,58,427 ಬಾಲಕರು, 4,37,844 ಬಾಲಕಿಯರು ಪರೀಕ್ಷೆ ಬರೆಯಲಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos