ಪರೀಕ್ಷೆ ರದ್ದುಗೊಳಿಸಿ ಎಂದು ನಿರ್ಧಾರ

ಪರೀಕ್ಷೆ ರದ್ದುಗೊಳಿಸಿ ಎಂದು ನಿರ್ಧಾರ

ಬೆಂಗಳೂರು: ಜೂನ್ ೨೫ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಸಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮಂಡಳಿ ಜೂನ್ ೨೫ರಿಂದ ಜುಲೈ ೨ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ನಿರ್ಧರಿಸಿತ್ತು. ಆದರೆ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೊರೋನಾ ಸೋಂಕಿನಿಂದ ಪರೀಕ್ಷೆ ಮುಂದೂಡುವಂತೆ ಎಚ್‌ಡಿಕೆ ಆಗ್ರಹಿಸಿದ್ದಾರೆ.

ಜೂನ್ ೨೫ರಿಂದ ರಾಜ್ಯದಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರ ತಮ್ಮ ನಿರ್ಧಾರದಿಂದ ಹಿಂದೆ ಸರಿಯಬೇಕು. ಈ ಬಾರಿ ರಾಜ್ಯದಲ್ಲಿ ೮ ಲಕ್ಷ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಪರೀಕ್ಷೆ ನಡೆಸಲೇಬೇಕಾದರೆ ಅಕ್ಟೋಬರ್ ತಿಂಗಳಲ್ಲಿ ನಡೆಸಲಿ. ಇಲ್ಲವಾದರೆ ತೆಲಂಗಾಣ ರಾಜ್ಯದಂತೆ ಪರೀಕ್ಷೆ ರದ್ದುಗೊಳಿಸಿ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲಿ ಎಂದು ಹೇಳಿದ್ದಾರೆ.

ವಿದ್ಯರ‍್ಥಿಗಳು, ಪೋಷಕರು ಹಾಗೂ ಪರೀಕ್ಷಾ ಸಿಬ್ಬಂದಿ  ಸೇರಿದಂತೆ ೨೪ ಲಕ್ಷ  ಮಂದಿಯ ಜೀವ ಮತ್ತು ಭವಿಷ್ಯದೊಂದಿಗೆ  ರಾಜ್ಯ ರ‍್ಕಾರ ಚೆಲ್ಲಾಟವಾಡುತ್ತಿದೆ. ಏನಾದರೂ ಅವಗಡಗಳು ಸಂಭವಿಸಿದರೆ ಶಿಕ್ಷಣ ಸಚಿವರು ಮತ್ತು ರಾಜ್ಯ ರ‍್ಕಾರವೇ ಹೊಣೆ. ರ‍್ಕಾರ ಈ ಬಗ್ಗೆ ತಕ್ಷಣವೇ ನರ‍್ಧಾರ ಕೈಗೊಳ್ಳಬೇಕು.

ಫ್ರೆಶ್ ನ್ಯೂಸ್

Latest Posts

Featured Videos