ಮಾ. 21ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭ

ಮಾ. 21ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭ

ಬೆಂಗಳೂರು ಮಾ.15, ನ್ಯೂಸ್ ಎಕ್ಸ್ ಪ್ರೆಸ್ : ಎಸ್ಎಸ್ಎಲ್ಸಿ ಪರೀಕ್ಷೆಯು  ಇನ್ನೇನು ಶುರುವಾಗಿಯೇ ಬಿಟ್ಟಿತು. ಮಾ. 21ರಿಂದ ಆರಂಭವಾಗಲಿರುವ ಪರೀಕ್ಷೆ ಸುಸೂತ್ರವಾಗಿ ನಡೆಯಲು ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಟಿ ಸುನೀಲ್ ಕುಮಾರ್ ಸುತ್ತೋಲೆ ಹೊರಡಿಸಿದ್ದಾರೆ.

ಏ. 4ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಬೆಳಗ್ಗೆ 8ರಿಂದ ಸಂಜೆ 6 ಗಂಟೆಯವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿರುವ ಜೆರಾಕ್ಸ್ ಅಂಗಡಿಗಳನ್ನು ತೆರೆಯದಂತೆ ತಿಳಿಸಲಾಗಿದೆ.

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 5 ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯ ಗುಂಪು ಸೇರುವುದು ಅಥವಾ ತಿರುಗುವುದು ಕಂಡರೆ, ಅನುಮಾನಾಸ್ಪದ ವ್ಯಕ್ತಿಗಳು ಪರೀಕ್ಷಾ ಕೇಂದ್ರ ಪ್ರವೇಶಿಸುವುದು, ಪರೀಕ್ಷಾ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಹೊರಗಿನ ವ್ಯಕ್ತಿಗಳು ಯಾವುದೇ ಬೆದರಿಕೆ ಒಡ್ಡುವುದನ್ನು, ನಿಷೇಧಿತ ಪರೀಕ್ಷಾ ಕೇಂದ್ರಗಳ ಸುತ್ತ ಮೊಬೈಲ್ ಬಳಕೆಯನ್ನು, ಪರೀಕ್ಷಾ ಗೌಪ್ಯ ಸಾಮಗ್ರಿಗಳನ್ನು ಯಾವುದೇ ಕಾರಣಕ್ಕೂ ಪರೀಕ್ಷಾ ಕೇಂದ್ರದಿಂದ ಹೊರಗೆ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos