SSLC ಪರೀಕ್ಷೆ ಬರೆಯಬೇಕಿದ್ದ ಇಬ್ಬರು ವಿದ್ಯಾರ್ಥಿಗಳು ಸಾವು

SSLC ಪರೀಕ್ಷೆ ಬರೆಯಬೇಕಿದ್ದ ಇಬ್ಬರು ವಿದ್ಯಾರ್ಥಿಗಳು ಸಾವು

ಶಿವಮೊಗ್ಗ: ಇಂದಿನಿಂದ ರಾಜ್ಯಾದ್ಯಂತ 2023-24ನೇ ಸಾಲಿನ SSLC ವಾರ್ಷಿಕ ಪರೀಕ್ಷೆಗಳು ಆರಂಭಗೊಳ್ಳಲಿವೆ. ಕರ್ನಾಟಕ ಶಿಕ್ಷಣ ಇಲಾಖೆ ಪರೀಕ್ಷೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ರಾಜ್ಯದ 2,750 ಕೇಂದ್ರಗಳಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆಗಳು ನಡೆಯಲಿವೆ. 2023-24 ಸಾಲಿನ SSLC ಪರೀಕ್ಷೆ ಇಂದಿನಿಂದ ಏಪ್ರಿಲ್ 4ರ ವರೆಗೆ ನಡೆಯಲಿದೆ. ರಾಜ್ಯಾದ್ಯಂತ ಒಟ್ಟು 8,69,968 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. 4,41,910 ಬಾಲಕರು ಹಾಗೂ 4,28,058 ಬಾಲಕಿಯರು ನೋಂದಣಿ ಮಾಡಿಕೊಂಡಿದ್ದಾರೆ.

ಶಿಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಬೇಕಿದ್ದ ಇಬ್ಬರು ವಿದ್ಯಾರ್ಥಿಗಳು ದುರಂತ ಅಂತ್ಯ ಕಂಡಿದ್ದಾರೆ. ಎರಡು ಪ್ರತ್ಯೇಕ ಪ್ರಕರಣಗಳು ಶಿವಮೊಗ್ಗದಲ್ಲಿ ದಾಖಲಾಗಿದೆ.

ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಬೇಕಿದ್ದವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಯಡೆಹಳ್ಳಿ ಗ್ರಾಮದಲ್ಲಿ ನಡೆದಿದೆ.ಪರಶುರಾಮ್ (17) ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಮನೆಯ ಹಿಂಭಾಗ ಈತ ಆತ್ಮಹತ್ಯೆ ಮಾಡಿಕೊಂಡಿದ್ದು, ಪರೀಕ್ಷೆ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಮತ್ತೊಬ್ಬ ವಿದ್ಯಾರ್ಥಿ ಎಸ್‌ಎಸ್‌ಎಲ್ ಸಿ ಪರೀಕ್ಷೆಗೆ ಹಾಜರಾಗಬೇಕಿದ್ದ ವಿದ್ಯಾರ್ಥಿನಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.ಜಂಬರಘಟ್ಟ ಗ್ರಾಮದ ವಿದ್ಯಾರ್ಥಿನಿ ಉಮ್ಮೆ ಕೂಲ್ಲುಂ(14) ಮೃತಪಟ್ಟ ವಿದ್ಯಾರ್ಥಿನಿ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಮೂಡಲವಿಠಲಾಪುರ ಗ್ರಾಮದಲ್ಲಿ ನಿನ್ನೆ  ಸಂಜೆ ನಡೆದ ಅಪಘಾತದಲ್ಲಿ ಅವರು ಸಾವನ್ನಪ್ಪಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos